ನಾಡ ಬಂದೂಕಿನಿಂದ ಆನೆಗೆ ಗುಂಡು ಹಾರಿಸಿ ಹತ್ಯೆಗೈದ ಕಿಡಿಗೇಡಿಗಳು!

ಪಿರಿಯಾಪಟ್ಟಣ:ಯಾರೋ ಕಿಡಿಗೇಡಿಗಳು ಆನೆಗೆ ನಾಡಬಂದೂಕಿನಿಂದ ಗುಂಡನ್ನು ಹೊಡೆದಿದ್ದು, ಸ್ಥಳದಲ್ಲಿಯೇ ಹೆಣ್ಣಾನೆ ಸಾವನ್ನಪ್ಪಿದ ಘಟನೆ ತಾಲೂಕಿನ ಸುಳುಗೋಡು ಗ್ರಾಮದಲ್ಲಿ ನಡೆದಿದೆ.

ಪಿರಿಯಾಪಟ್ಟಣ ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಕೋಗಿಲವಾಡಿ, ಸುಳಗೋಡು, ಕಾಳತಿಮ್ಮನಹಳ್ಳಿ ಇತ್ಯಾದಿ ಗ್ರಾಮಗಳಲ್ಲಿ ಪ್ರತಿನಿತ್ಯ ಆನೆಗಳ ಹಾವಳಿಯು ಹೆಚ್ಚಾಗಿದ್ದು, ರೈತರು ಬೆಳೆದ ಬೆಳೆಗಳನ್ನು ಆನೆಗಳ ಹಿಂಡು ನಾಶಪಡಿಸುತ್ತಿತ್ತು.ಅನೇಕ ಬಾರಿ ಅರಣ್ಯ ಇಲಾಖೆಯವರಿಗೆ ಮಾಹಿತಿಯನ್ನು ನೀಡಿದರು ಕೂಡ ಅರಣ್ಯ ಇಲಾಖೆಯವರು ಯಾವುದೇ ಕ್ರಮವನ್ನು ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದು ಇದನ್ನು ಸಹಿಸದ ದುಷ್ಕರ್ಮಿಗಳು ನಾಡ ಬಂದೂಕಿನಿಂದ ಗುಂಡುಗಳನ್ನು ಹಾರಿಸಿ ಆನೆಯನ್ನು ಹತ್ಯೆಗೈದಿರುವ ಘಟನೆ ನಡೆದಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಬುಧವಾರ ರಾತ್ರಿ 9 ಗಂಟೆಯ ಸಂದರ್ಭದಲ್ಲಿ ಆನೆಗಳ ಹಿಂಡು ಜಮೀನಿಗೆ ಲಗ್ಗೆ ಇಟ್ಟಿದ್ದು,ಇದನ್ನು ತಡೆಯಲು ಹೋದ ರೈತರ ಮೇಲೆ ದಾಳಿ ಮಾಡಲು ಯತ್ನಿಸಿದೆ. ಈ ಕಾರಣದಿಂದ ಆನೆಗಳ ಹಿಂಡಿನ ಮೇಲೆ ಯಾರೋ ಅಪರಿಚಿತರು ಈ ಕೃತ್ಯವನ್ನು ಎಸಗಿದ್ದಾರೆ ಎಂದು ತಿಳಿದುಬಂದಿದ್ದು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ತನಿಖೆಯನ್ನು ನಡೆಸುತ್ತಿದ್ದಾರೆ.

error: Content is protected !!
Scroll to Top
%d bloggers like this: