ಮನ್ ಕಿ ಬಾತ್ : ಅಮೈ ಮಹಾಲಿಂಗ ನಾಯ್ಕರ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ಮೋದಿ

Share the Article

ಪ್ರಧಾನಿ ನರೇಂದ್ರ ಮೋದಿ ಅವರು ಆದಿತ್ಯವಾರ ಮನ್ ಕಿ ಬಾತ್ ನ 85 ನೇ ಆವೃತ್ತಿಯಲ್ಲಿ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ರೈತ ಅಮೈ ಮಹಾಲಿಂಗ ನಾಯ್ಕರ ಸಾಧನೆಯನ್ನು ಶ್ಲಾಘಿಸಿದರು.

ಮಹಾಲಿಂಗ ನಾಯ್ಕರು ಎಲ್ಲರೂ ಬೆರಗಾಗುವ ಸಾಧನೆ ಮಾಡಿದ್ದಾರೆ. ಅವರು ರೈತರಿಗೆ ಮಾದರಿಯಾಗಿದ್ದಾರೆ. ಅವರು ಪ್ರಶಸ್ತಿಗೆ ಯೋಗ್ಯವಾದ ಸಾಧನೆ ಮಾಡಿದ್ದಾರೆಪದ್ಮ ಪ್ರಶಸ್ತಿ ಪುರಸ್ಕೃತರಲ್ಲಿ ಇಂತಹ ಅನೇಕ ಹೆಸರುಗಳಿವೆ, ಅದರ ಬಗ್ಗೆ ಕೆಲವೇ ಜನರಿಗೆ ತಿಳಿದಿದೆ ಎಂದರು.

ದೇಶದಲ್ಲಿ ಪದ್ಮ ಪ್ರಶಸ್ತಿ ಕೂಡ ಘೋಷಣೆಯಾಗಿದೆ. ಪ್ರತಿಯೊಬ್ಬ ಪದ್ಮ ಪ್ರಶಸ್ತಿ ಪುರಸ್ಕೃತರು ನಮ್ಮ ರಾಷ್ಟ್ರ ಮತ್ತು ಸಮಾಜಕ್ಕೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ್ದಾರೆ.ಇವರು ನಮ್ಮ ದೇಶದ ಅಸಾಧಾರಣ ವೀರರು, ಅವರು ಸಾಮಾನ್ಯ ಸಂದರ್ಭಗಳಲ್ಲಿ ಅಸಾಮಾನ್ಯ ಕೆಲಸಗಳನ್ನು ಮಾಡಿದ್ದಾರೆ ಎಂದರು.

Leave A Reply