ಬಿದಿರು ಕೃಷಿಕರನ್ನು ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳ ಮಾಹಿತಿ ಇಲ್ಲಿದೆ ನೋಡಿ |ಅರ್ಜಿ ಸಲ್ಲಿಸಲು ಫೆ.5 ಕೊನೆ ದಿನ
ಬಿದಿರು ಕೃಷಿಯಲ್ಲಿ ತೊಡಗಿಸಿಕೊಂಡವರಿಗೊಂದು ಸಿಹಿ ಸುದ್ದಿ ಇದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು NFAP-Bamboo Mission, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಪರಿಶಿಷ್ಟ ಪಂಗಡದ ರೈತರು ಬಿದಿರು ಕೃಷಿಯನ್ನು ಮಾಡಲು ಪ್ರೋತ್ಸಾಹಿಸಲು ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಪಂಗಡದ ರೈತರು ಜಮೀನು ಹೊಂದಿರುವ ಕುರಿತು ಆರ್‌ಟಿಸಿ/ ಅರಣ್ಯ ಹಕ್ಕು ಅಧಿನಿಯಮದಡಿ ಹಕ್ಕು ಪತ್ರ ಹೊಂದಿರಬೇಕು ಹಾಗೂ ಜಾತಿ ಪ್ರಮಾಣ ಪ್ರತವನ್ನು ಸಲ್ಲಿಸಬೇಕು.ಪ್ರತಿ ಎಕರೆಗೆ ಪ್ರತಿ ವರ್ಷ ರೂ. 18,000 ಗಳಂತೆ ಮೂರು ವರ್ಷಗಳ ಕಾಲಾವಧಿಗೆ ಸಹಾಯಧನ ಒದಗಿಸುವ ಕಾರ್ಯಕ್ರಮ ಇದಾಗಿದ್ದು, ಅರ್ಹ ರೈತರು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅರ್ಜಿಗಳನ್ನು ಪಡೆದು, 2022ರ ಫೆಬ್ರವರಿ 05ರೊಳಗೆ ಸಲ್ಲಿಸುವುದು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ:205, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ.: 080-29787448, ಮೊ.ಸಂ.: 9141004587, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ ದೂ.ಸಂ.: 27681784, ದೊಡ್ಡಬಳ್ಳಾಪುರ ದೂ.ಸಂ.: 27623681, ಹೊಸಕೋಟೆ ದೂ.ಸಂ.:27931528, ನೆಲಮಂಗಲ ದೂ.ಸಂ.: 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.