ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇರ ಸಂದರ್ಶನ : ಹೆಚ್ಚಿನ ವಿವರಗಳು ಇಲ್ಲಿದೆ
2021-22 ನೇ ಶೈಕ್ಷಣಿಕ ಸಾಲಿಗೆ ವಿವಿಧ ಕಾಲೇಜುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.
ಮಂಗಳೂರು ವಿಶ್ವವಿದ್ಯಾನಿಲಯ ಆವರಣ, ಮಂಗಳಗಂಗೋತ್ರಿ/ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರ ಇಲ್ಲಿಯ ಸ್ನಾತಕೋತ್ತರ ವಿಭಾಗಗಳಿಗೆ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು /ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು, ಮಡಿಕೇರಿಯಲ್ಲಿರುವ ಸ್ನಾತಕೋತ್ತರ ಕೋರ್ಸ್ ಗಳಿಗೆ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಮಂಗಳೂರು / ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು / ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು, ಮಡಿಕೇರಿ / ವಿಶ್ವವಿದ್ಯಾನಿಲಯದ ಪ್ರಥಮ ದರ್ಜೆ ಕಾಲೇಜು, ಮಂಗಳಗಂಗೋತ್ರಿ / ವಿಶ್ವವಿದ್ಯಾನಿಲಯ ಕಾಲೇಜು, ನೆಲ್ಯಾಡಿ / ವಿಶ್ವವಿದ್ಯಾನಿಲಯ ಕಾಲೇಜು, ಬನ್ನಡ್ಕ, ಮೂಡುಬಿದಿರೆ ಇಲ್ಲಿಯ ಪದವಿ ಕೋರ್ಸ್ ಗಳಿಗೆ 2021-22 ನೇ ಶೈಕ್ಷಣಿಕ ಸಾಲಿಗೆ ಕೆಳಕಂಡ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು, ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಹೊಂದಿರುವ ( ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ) ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ನಿಂದ ಪಡೆದು, ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ ಮತ್ತು ದಾಖಲೆಗಳ ( ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್, ಪಿಜಿ ಮಾರ್ಕ್ಸ್ ಕಾರ್ಡ್, ಕಾಸ್ಟ್ ಸರ್ಟಿಫಿಕೇಟ್, ಸರ್ವಿಸ್ ಸರ್ಟಿಫಿಕೇಟ್, ಪ್ರಕಟಣೆಗಳು, ಯುಜಿಸಿ, ಎನ್ ಇ ಟಿ/ ಎಸ್ ಎಲ್ ಇ ಟಿ ಉತ್ತೀರ್ಣತೆ/ ಎಂ.ಫಿಲ್/ ಪಿ ಹೆಚ್ ಡಿ ಪದವಿ ಪ್ರಮಾಣ ಪತ್ರ) ಪ್ರತಿ ಹಾಗೂ ಮೂಲದಾಖಲೆಗಳೊಂದಿಗೆ ಕುಲಸಚಿವರ ಕಚೇರಿ, ಆಡಳಿತ ಸೌಧ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ – 574199 ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗತಕ್ಕದ್ದು.
ಯುಜಿಸಿ, ಎನ್ ಇ ಟಿ/ ಎಸ್ ಎಲ್ ಇ ಟಿ ಉತ್ತೀರ್ಣತೆ/ ಎಂ ಫಿಲ್/ ಪಿಹೆಚ್ ಡಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
ಫೆ 5 ರ ಬೆಳಗ್ಗೆ 9 ರಿಂದ ರಸಾಯನಶಾಸ್ತ್ರ, ಅನ್ವಯಿಕ ಪ್ರಾಣಿಶಾಸ್ತ್ರ, ಗಣಿತ, ಕಂಪ್ಯೂಟರ್ ಸೈನ್ಸ್ ಹಾಗೂ ಮಧ್ಯಾಹ್ನ 1 ಗಂಟೆಗೆ ಯೋಗಿಕ್ ಸೈನ್ಸ್, ಸ್ಟ್ಯಾಟಿಸ್ಟಿಕ್ಸ್, ಭೌತಶಾಸ್ತ್ರ, ಸೈಬರ್ ಸೆಕ್ಯುರಿಟಿ ಪ್ರೋಗ್ರಾಮ್ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಫೆ. 7 ರ ಬೆಳಗ್ಗೆ 9 ರಿಂದ ಇಂಗ್ಲೀಷ್, ತುಳು, ಸೋಶಿಯಲ್ ವರ್ಕ್, ಎಂಸಿಜೆ, ದೈಹಿಕ ಶಿಕ್ಷಣ ಹಾಗೂ ಮಧ್ಯಾಹ್ನ 1 ಗಂಟೆಗೆ ಬ್ಯುಸಿನೆಸ್ ಎಡ್ ಮಿನಿಸ್ಟ್ರೇಶನ್, ಎಂಬಿಎ ( ಟಿಟಿಎಂ), ಬಿಬಿಎ( ಟಿಟಿ) ವಿಷಯಗಳಿಗೆ ಅತಿಥಿ ಉಪನ್ಯಾಸಕರ ಆಯ್ಕೆಗೆ ನೇರ ಸಂದರ್ಶನ ಮಂಗಳೂರು ವಿವಿ ಕುಲಸಚಿವರ ಕಚೇರಿಯಲ್ಲಿ ನಡೆಯಲಿದೆ.