ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಬಸ್ ಚಾಲಕನ ಬಂಧನ

Share the Article

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಸ್ ಚಾಲಕನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ದಯಾನಂದ(32) ಎಂದು ಗುರುತಿಸಲಾಗಿದೆ. ಆರೋಪಿ ದಯಾನಂದ ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈತ 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ಬಗ್ಗೆ ಬಾಲಕಿಯ ಪೋಷಕರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Leave A Reply