ನೆಲ್ಯಾಡಿ :ಇನೋವಾ ಕಾರು ಹಾಗೂ ಲಾರಿ ನಡುವೆ ಅಪಘಾತ |ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ:ಸಿಮೆಂಟ್ ಸಾಗಾಟದ ಲಾರಿ ಹಾಗೂ
ಇನೋವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ಇಂದು ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.