ಹಿಜಾಬ್ ವಿವಾದ : ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

Share the Article

ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಮತ್ತು ತನ್ನ ಧಾರ್ಮಿಕ ಆಚರಣೆ ಪಾಲಿಸುವ ವಿಚಾರದಲ್ಲಿ ಮಧ್ಯಪ್ರವೇಶಿಸದಂತೆ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಗೆ ನಿರ್ದೇಶಿಸಬೇಕು ಎಂದು ವಿದ್ಯಾರ್ಥಿನಿಯೊಬ್ಬರು ಕರ್ನಾಟಕ ಹೈ ಕೋರ್ಟ್ ಗೆ ಮನವಿ ಸಲ್ಲಿಸಿದ್ದು, ಬುಧವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಸೋಮವಾರ ಕಾಲೇಜ್ ನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಉಡುಪಿಯ ಮಹಿಳಾ‌ ಸರಕಾರಿ ಪಿಯು ಕಾಲೇಜಿನ ಹಿಜಾಬ್ ವಿವಾದ ಈಗ ಹೈಕೋರ್ಟ್ ಮೆಟ್ಟಿಲೇರಿದೆ.

ವಿದ್ಯಾರ್ಥಿನಿ ರೇಶಮ್ ಈ ಮನವಿಯನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ. ರಾಜ್ಯ ಸರಕಾರ, ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿ ಜಿಲ್ಲಾಧಿಕಾರಿ ಮತ್ತು ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿಸಿದೆ.

Leave A Reply