ರುಖೋ ಜರಾ,ಸಬರ್ ಕರೋ ಖ್ಯಾತಿಯ ವಿಕಾಸ್ ಪಾಠಕ್ ಬಂಧನ

ರುಖೋ ಜರಾ, ಸಬರ್ ಕರೋ…” ಖ್ಯಾತಿಯ ಪ್ರಸಿದ್ಧ ಯೂಟ್ಯೂಬರ್ ಹಿಂದೂಸ್ಥಾನಿ ಭಾವು ಯಾನೆ ವಿಕಾಸ್ ಪಾಠಕ್ ಅವರನ್ನು ಮುಂಬೈನ ಧಾರವಿ ಪೊಲೀಸರು ಬಂಧಿಸಿದ್ದಾರೆ.

ಅವರು ನಿನ್ನೆ ಜ.31ರಂದು 10 ಮತ್ತು 12 ನೇ ತರಗತಿಗಳ ಆಫ್‌ ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಲು ಮಹಾರಾಷ್ಟ್ರ ಶಿಕ್ಷಣ ಸಚಿವ ವರ್ಷಾ ಗಾಯಕ್‌ವಾಡ್ ಅವರ ನಿವಾಸದ ಬಳಿ ಜಮಾಯಿಸುವಂತೆ ಅವರು ವಿದ್ಯಾರ್ಥಿಗಳನ್ನು ಪ್ರಚೋದಿಸಿದ ಕಾರಣದಿಂದ ವಿಕಾಸ್ ವಿರುದ್ಧ ದೂರು ದಾಖಲಾಗಿದೆ.

ಕೋವಿಡ್ -19 ದೃಷ್ಟಿಯಿಂದ 10 ಮತ್ತು 12 ನೇ ತರಗತಿಗಳಿಗೆ ಆನ್‌ಲೈನ್ ಪರೀಕ್ಷೆಗೆ ಒತ್ತಾಯಿಸಿ ಧಾರಾವಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದ ಪ್ರಭಾವಿ ವಿಕಾಸ್ ಪಾಠಕ್ ಅವರನ್ನು ಧಾರಾವಿ ಪೊಲೀಸರು ಬಂಧಿಸಿದ್ದಾರೆ.

ಪಾಠಕ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಸುದ್ದಿ ಸಂಸ್ಥೆ ಎಎನ್ಐ ತಿಳಿಸಿದೆ.

‘ಹಿಂದುಸ್ಥಾನಿ ಭಾವು’ ಎಂಬಾತ ತನ್ನ ಇನ್ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಅಪ್ಲೋಡ್ ಮಾಡಿದ್ದು, ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿದೆ ಎಂದು ಆರೋಪಿಸಲಾಗಿದೆ.

ಗಲಭೆ, ಮಹಾರಾಷ್ಟ್ರ ಪೊಲೀಸ್ ಕಾಯಿದೆ, ವಿಪತ್ತು ನಿರ್ವಹಣಾ ಕಾಯಿದೆ ಮತ್ತು ಮಹಾರಾಷ್ಟ್ರದ ಆಸ್ತಿ ವಿರೂಪಗೊಳಿಸುವಿಕೆ ಕಾಯ್ದೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ಹಲವು ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.