ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆಟೋ ಚಾಲಕನ ಬಂಧನ

Share the Article

ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿ ಕಂಬಳಬೆಟ್ಟು ನಿವಾಸಿ ಅಬ್ದುಲ್ ನಾಸಿರ್.

ಪರಿಚಯದ ಅಪ್ರಾಪ್ತ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದು,ಅಬ್ದುಲ್ ನಾಸಿರ್ ಗೆ ಮನೆಗೆ ಬಾರದಂತೆ ಎಚ್ಚರಿಕೆ ನೀಡಿದ್ದರೂ ಆ ಬಳಿಕ ಆಕೆಯ ಮನೆಗೆ ಆಗಾಗ ಬರುತ್ತಿದ್ದ. ಆಕೆಯನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ ಎಂದು ಬಾಲಕಿಯ ತಾಯಿ ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.

ಆರೋಪಿ ವಿರುದ್ಧ ಫೋಕ್ಲೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave A Reply