ಫೆ.1ರಿಂದ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ
ಪುತ್ತೂರು: ಸರ್ವೆ ಗ್ರಾಮದ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠೆ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವ ಫೆ. 1ರಿಂದ 7ರವರೆಗೆ ನಾನಾ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ, ಜೀರ್ಣೋದ್ಧಾರ ಸಮಿತಿ, ವ್ಯವಸ್ಥಾಪನಾ ಸಮಿತಿಗಳ ಜಂಟಿ ಪ್ರಕಟಣೆ ತಿಳಿಸಿದೆ.
ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿಧಿ ವಿಧಾನಗಳು ನಡೆಯಲಿವೆ. ಫೆ. 1ರಂದು ಬೆಳಗ್ಗೆ ಉಗ್ರಾಣ ಮುಹೂರ್ತ, 11 ಗಂಟೆಗೆ ಹಸಿರುವಾಣಿ ಮೆರವಣಿಗೆ ನಡೆಯಲಿದೆ. ಸಂಜೆ ತಂತ್ರಿಗಳ ಆಗಮನವಾಗಲಿದ್ದು, ರಾತ್ರಿ ಸಾಮೂಹಿಕ ಪ್ರಾರ್ಥನೆ, ಆಚಾರ್ಯವರಣ, ಪ್ರಾಸಾದ ಪರಿಗ್ರಹ, ಪುಣ್ಯಾಹ, ಪ್ರಾಸಾದ ಶುದ್ಧಿ,. ವಾಸ್ತು ರಾಕ್ಷೋಘ್ನ ಹೋಮ, ವಾಸ್ತುಬಲಿ, ಅಂಕುರಾರ್ಪಣೆ, ಪೂಜೆ ನಡೆಯಲಿದೆ.
ಫೆ.2ರಂದು ಬೆಳಗ್ಗೆ ಬಿಂಬ ಶುದ್ಧಿ, ಕಲಶಪೂಜೆ, ಕಲಶಾಭಿಷೇಕ, ಪ್ರಾಯಶ್ಚಿತ್ತ ಹೋಮ, ರಾತ್ರಿ ಪೂಜೆ ಅನ್ನಸಂತರ್ಪಣೆ ನಡೆಯಲಿದೆ. ಫೆ.3ರಂದು ಬೆಳಗ್ಗೆ ಶಾಂತಿ ಹೋಮಗಳು, ರಾತ್ರಿ ದುರ್ಗಾನಮಸ್ಕಾರ ಪೂಜೆ, ಫೆ.4ರಂದು ಬೆಳಗ್ಗೆ ತತ್ವ ಕಲಶ ಪೂಜೆ, ಅನುಜ್ಞಾ ಕಲಶ ಪೂಜೆ, ಕಲಶಾಭಿಷೇಕ, ಅನ್ನಸಂತರ್ಪಣೆ ನಡೆದು, ರಾತ್ರಿ ದುರ್ಗಾ ನಮಸ್ಕಾರ, ಅಂಕುರ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ.
ಫೆ.5ರಂದು ಬೆಳಗ್ಗೆ ಸಂಹಾರತತ್ವ ಹೋಮ, ಜೀವಕಲಶ ಪೂಜೆ, ಜೀವೋಧ್ವಾಸನ, ಶಯ್ಯಾಗಮನ, ಶಯನ, ಪೂಜೆ, ಅನ್ನಸಂತರ್ಪಣೆ, ರಾತ್ರಿ ಬಿಂಬ ಶುದ್ಧಿ, ಕುಂಭೇಶಕರ್ಕರಿ ಕಲಶ ಪೂಜೆ, ಅಧಿವಾಸ ಹೋಮ, ಬ್ರಹ್ಮಕಲಶ ಪೂಜೆ, ಧ್ಯಾನಾಧಿವಾಸ, ಪರಿಕಲಶ ಪೂಜೆ, ಕಲಶಾಧಿವಾಸ, ಅನ್ನಸಂತರ್ಪಣೆ ನಡೆಯಲಿದೆ.
ಬ್ರಹ್ಮಕಲಶೋತ್ಸವ
ಫೆ.6ರಂದು ಬೆಳಗ್ಗೆ ಗಣಹೋಮ ನಡೆದು 8.20ರ ಕುಂಭಲಗ್ನ ಸುಮುಹೂರ್ತದಲ್ಲಿ ಶ್ರೀ ವಿಷ್ಣುಮೂರ್ತಿ ದೇವರ ಬಿಂಬ ಪ್ರತಿಷ್ಠೆ, ಜೀವಕಲಶಾಭಿಷೇಕ, ಜೀವಾವಾಹನೆ, ಶಿಖರ ಪ್ರತಿಷ್ಠೆ, ಪಿಲಿಭೂತ, ರಕ್ತೇಶ್ವರಿ, ಶಿರಾಡಿ, ಪಂಜುರ್ಲಿ ದೈವಗಳ ಪ್ರತಿಷ್ಠೆ, ದೇವರಿಗೆ ಪರಿಕಲಶ ಅಭಿಷೇಕ, ಬ್ರಹ್ಮಕಲಶಾಭಿಷೇಕ, ಪರಿವಾರ ಪ್ರತಿಷ್ಠೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಭೂತಬಲಿ, ಸೇವಾ ಸುತ್ತುಗಳು, ರಾಜಾಂಗಣ ಪ್ರಸಾದ, ಮಂತ್ರಾಕ್ಷತೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ಫೆ.7ರಂದು ದೈವಗಳ ನೇಮೋತ್ಸವ ಸಂಪನ್ನಗೊಳ್ಳಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರೀಶ್ ಎಲಿಯತ್ತಾಯ, ಅಧ್ಯಕ್ಷರಾದ ನಾಗೇಶ್ ರಾವ್, ಕಾರ್ಯಾಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ಪ್ರ.ಕಾರ್ಯದರ್ಶಿ ರವಿನಾರಾಯಣ ಭಟ್ ಎನ್, ಕೋಶಾಧಿಕಾರಿ ಪ್ರಸನ್ನ ರೈ ಮಜಲುಗದ್ದೆ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಶಾಸಕ ಸಂಜೀವ ಮಠಂದೂರು, ಅಧ್ಯಕ್ಷ ರಾಜಾರಾವ್ ಮುಡಂಬಡಿತ್ತಾಯ, ಕಾರ್ಯಾಧ್ಯಕ್ಷ ಭಾಸ್ಕರ ರೈ ಮಾದೋಡಿ, ಪ್ರ.ಕಾರ್ಯದರ್ಶಿ ಕೃಷ್ಣ ಕುಮಾರ ರೈ ಕೆದಂಬಾಡಿಗುತ್ತು, ಸಂಘಟನಾ ಸಂಚಾಲಕ ಉಮೇಶ್ ಸುವರ್ಣ ಸೊರಕೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಗೌಡ ಎಲಿಯ ತಿಳಿಸಿದ್ದಾರೆ.
—-ಬಾಕ್ಸ್–
ಧಾರ್ಮಿಕ, ಸಾಂಸ್ಕೃತಿಕ ವೈವಿಧ್ಯ
ಫೆ. 2ರಿಂದ 5ರವರೆಗೆ ನಿತ್ಯ ಸಂಜೆ 6 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಫೆ.4ರಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಚಿವ ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು ಭಾಗವಹಿಸಲಿದ್ದಾರೆ.ಫೆ.5ರಂದು ಉಡುಪಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್,ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಭಾಗವಹಿಸಲಿದ್ದಾರೆ. ಫೆ. 2ರಿಂದ 6ರವರೆಗೆ ಪ್ರತೀ ರಾತ್ರಿ ಸಾಂಸ್ಕೃತಿಕ ವೈಭವ ಏರ್ಪಡಿಸಲಾಗಿದೆ.