ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ 118 ‘ ಸಾಗರ ಮಿತ್ರ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಗುತ್ತಿಗೆ / ಒಪ್ಪಂದದ ಆಧಾರದ ಮೇಲೆ 118 ‘ ಸಾಗರ ಮಿತ್ರ’ ರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ದಕ್ಷಿಣ ಕನ್ನಡ -14
ಉಡುಪಿ – 50
ಉತ್ತರ ಕನ್ನಡ – 54

ಈ ಮೇಲ್ಕಂಡ ಜಿಲ್ಲೆಗಳ ಆಯ್ದ ಗ್ರಾಮಗಳಿಗೆ ಸಾಗರ ಮಿತ್ರರನ್ನು ಗುತ್ತಿಗೆ / ಒಪ್ಪಂದದ ಆಧಾರದ ಮೇಲೆ ಒಂಭತ್ತು ತಿಂಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು.

ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-02-2022

ದಿನಾಂಕ 18-02-2022 ರಂದು ಬೆಳಗ್ಗೆ 10 ಗಂಟೆಯ ನಂತರ ಡೀನ್ ಮೀನುಗಾರಿಕಾ ಮಹಾವಿದ್ಯಾಲಯ, ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುವುದು.

ದಿನಾಂಕ 21-02-2022 ರಂದು ಬೆಳಗ್ಗೆ 10 ಗಂಟೆಯ ನಂತರ ಮೀನುಗಾರಿಕೆ ಜಂಟಿ ನಿರ್ದೇಶಕರು, ಮೀನುಗಾರಿಕಾ ಇಲಾಖೆ, ಉಡುಪಿಯಲ್ಲಿ, ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುವುದು.

ದಿನಾಂಕ : 25 -02-2022 ರಂದು ಬೆಳಗ್ಗೆ 10 ಗಂಟೆಯ ಮೀನುಗಾರಿಕಾ ಜಂಟಿ‌ ನಿರ್ದೇಶಕರು ಮೀನುಗಾರಿಕೆ ಇಲಾಖೆ, ಕಾರವಾರದಲ್ಲಿ ಉತ್ತರಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುವುದು.

ಅರ್ಜಿ ನಮೂನೆಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.