ಕುಂದಾಪುರದ ಸರ್ಕಾರಿ ಕಾಲೇಜಿಗೂ ಕಾಲಿಟ್ಟ ಹಿಜಾಬ್ ವಿವಾದ | 40 ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರ್!!

ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದ ಇದೀಗ ಕುಂದಾಪುರದ ಹಾಲಾಡಿಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿಗೂ ಕಾಲಿಟ್ಟಿದ್ದು, 40 ಹಿಂದೂ ಹುಡುಗರು ಕೇಸರಿ ಶಾಲು ಧರಿಸಿ ಬರುವ ಮೂಲಕ ಹಿಜಾಬ್ ಗೆ ಕೌಂಟರ್ ನೀಡುತ್ತಿದ್ದಾರೆ.

ಈಗಾಗಲೇ ಈ ಕಾಲೇಜಿಗೆ 27 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಆಗಮಿಸುತ್ತಿದ್ದಾರೆ. ಸಮಸ್ಯೆ ಪರಿಹರಿಸಲು ಶಾಸಕ ಹಾಲಾಡಿ ಶಾಸಕ ಶ್ರೀನಿವಾಸ ಶೆಟ್ಟಿಯವರ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರ ಮನವೊಲಿಸುವ ಪ್ರಯತ್ನ ಮಾಡಲಾಗಿದೆ.

ಶಾಸಕರು ಶಿಕ್ಷಣ ಸಚಿವರಾದ ನಾಗೇಶ್ ಅವರಿಗೆ ಕರೆ ಮಾಡಿ ವಿಚಾರವನ್ನು ತಿಳಿಸಿದ್ದು, ಕಾಂಪೌಂಡಿನ ಒಳಗೆ ಸಮವಸ್ತ್ರ ಧರಿಸಿ ಬರಲು ಮಾತ್ರ ಸೂಚಿಸಿದ್ದು, ಈ ವಿಚಾರವನನ್ನು ಸಭೆಯಲ್ಲಿ ಶಾಸಕರು ತಳಿಸಿದ್ದರೂ ಕೂಡ ಯಾವುದೇ ರೀತಿಯ ಪ್ರಯೋಜನವಾಗಿಲ್ಲ.

ಇನ್ನು ಈ ವಿವಾದಕ್ಕೆ ಸಂಬಂಧ ಪಟ್ಟಂತೆ ಹಿಂದೂ ಜಾಗರಣ ವೇದಿಕೆ ಪ್ರಮುಖ ಪ್ರಕಾಶ್ ಕುಕ್ಕೆಹಳ್ಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಸರಕಾರದ ಸೂಚನೆಯನ್ನು ನಾವು ಪಾಲಿಸಲು ಬದ್ಧರಾಗಿದ್ದೇವೆ.
ಆದರೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಬಂದರೆ ನಮ್ಮ ಹುಡುಗರು ಕೇಸರಿ ಶಾಲು ಧರಿಸಿ ತರಗತಿಗೆ ಹಾಜರಾಗುತ್ತಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Leave A Reply

Your email address will not be published.