ಬಾಲಿವುಡ್ ನ ಖ್ಯಾತ ಹಾಸ್ಯ ನಟ, ‘ಗುತ್ತಿ’ ಪಾತ್ರಧಾರಿಯ ಸುನೀಲ್ ಗ್ರೋವರ್ ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲು

ಹಾಸ್ಯನಟ ಕಪಿಲ್ ಶರ್ಮಾ ಅವರ ‘ ದಿ ಕಪಿಲ್ ಶರ್ಮಾ’ ಶೋ ನಲ್ಲಿ ‘ ಗುತ್ತಿ’ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ ನಟ ಸುನೀಲ್ ಗ್ರೋವರ್ ವೆಬ್ ಸರಣಿ ಚಿತ್ರೀಕರಣದಲ್ಲಿ ಮುಂಬೈನಲ್ಲಿ ತೊಡಗಿದ್ದಂತ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡಿದ್ದರಿಂದ ಏಷ್ಯನ್ ಹಾರ್ಟ್ ಇನ್ ಸ್ಟಿಟ್ಯೂಟ್ ಗೆ ಚಿಕಿತ್ಸೆಗಾಗಿ ದಾಖಲಾಗಿದ್ದು,‌ಈಗ ಶಸ್ತ್ರ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದು, ಸುನೀಲ್ ಗ್ರೋವರ್ ( 44) ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರಚಿಕಿತ್ಸೆ ಮಾಡಿದ್ದೇವೆ. ಆರೋಗ್ಯವಾಗಿರೋದಾಗಿ ಅವರು ಹೇಳಿದ್ದಾರೆ.

Leave A Reply

Your email address will not be published.