ಮಂಗಳೂರು : ಓಮಸತ್ವ ಮಾರುವ ನೆಪದಲ್ಲಿ ಒಂಟಿ ಮಹಿಳೆಯ ಮಾನಭಂಗಕ್ಕೆ ಯತ್ನ !!!

Share the Article

ಮಂಗಳೂರು : ವ್ಯಾಪಾರದ ನೆಪದಲ್ಲಿ ಮನೆಯಲ್ಲಿದ್ದ ಒಂಟಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಮಾಡಿದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಘಟನೆಯು ಗುರುವಾರ ( ಫೆ.3) ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ. ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಚನಕೆರೆ ನಿವಾಸಿ ಮೊಹಮ್ಮದ್ ಇಕ್ಬಾಲ್ ( 52) ತಂದೆ ಅಬೂಬಕ್ಕರ್ ಕಸ್ತೂರಿ ಮಾತ್ರೆಗಳನ್ನು ಮಾರಾಟ ಮಾಡುವ ಸಂದರ್ಭದಲ್ಲಿ ಒಂಟಿ ಮಹಿಳೆಯ ಕೈಯನ್ನು ಹಿಡಿದು ಅನುಚಿತವಾಗಿ ವರ್ತಿಸಿದ್ದಾನೆ. ಈತ ಮಹಿಳೆಯನ್ನು ಮಾನಭಂಗ ಮಾಡಲೂ ಪ್ರಯತ್ನ ಪಟ್ಟಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಮನೆಯಲ್ಲಿದ್ದ ಒಂಟಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಮಾಡಲು ಪ್ರಯತ್ನಿಸಿದಾಗ ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಈ ಕಾಮುಕನನ್ನು ಸ್ಥಳೀಯರು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.