ನಾರಾವಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು-ಇನ್ನೋರ್ವ ಗಂಭೀರ

ನಾರಾವಿ: ಬೆಳ್ಳಂಬೆಳಗ್ಗೆ ಬೈಕಿನಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ತೆರಳುತ್ತಿದ್ದ ವ್ಯಕ್ತಿಗಳಿಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಓರ್ವ ಮೃತಪಟ್ಟು ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾರಾವಿಯಲ್ಲಿ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಲಾರೆನ್ಸ್(38) ಹಾಗೂ ಗಂಭೀರ ಗಾಯಗೊಂಡವರನ್ನು ಬೆಳ್ತಂಗಡಿ ನೆಲ್ಲಿಕಾರು ನಿವಾಸಿ ಜಾನ್(81) ಎಂದು ಗುರುತಿಸಲಾಗಿದೆ.

ಘಟನೆ ನಡೆದ ಕೂಡಲೇ ಡಿಕ್ಕಿ ಹೊಡೆದ ಕಾರು ಪರಾರಿಯಾಗಿದ್ದು, ಗಾಯಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.