ಅಕ್ರಮ-ಸಕ್ರಮ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ ನೀಡಿದ ಕಂದಾಯ ಸಚಿವರು|ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷ ಕಾಲಾವಕಾಶ
ಬೆಂಗಳೂರು :ಅಕ್ರಮ ಸಕ್ರಮ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿ ಸುದ್ದಿ ನೀಡಿದ್ದು,ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಮೂನೆ-50, ನಮೂನೆ -57ರಡಿ ಸಕ್ರಮಕ್ಕೆ ಅರ್ಜಿ ಸಲ್ಲಿಸಿದವರಿಗೆ ಮತ್ತೊಂದು ಅವಕಾಶ ನೀಡಲಾಗುವುದು. ಕಂದಾಯ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಕಲಂ 94 ಸಿ ಹಾಗೂ 94ಸಿಸಿ ಅಡಿ ನೀಡಿದ ಹಕ್ಕುಪತ್ರಗಳ ನೋಂದಣಿಗೆ ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.ಗೋಮಾಳ, ಇತರೆ ಭೂಮಿಗೆ ಸಂಬಂಧಿಸಿದಂತೆ ಈ ಹಿಂದಿನ ನಿಯಮ ಬದಲಿಸಿ, ಕಠಿಣ ನಿಯಮ ಜಾರಿಗೊಳಿಸಲಾಗುವುದು.ಸರ್ಕಾರಿ ಜಮೀನು ಅರ್ಹರಿಗೆ ಸಿಗಬೇಕು ಎಂದು ತಿಳಿಸಿದ್ದಾರೆ.