ಬೆಳ್ತಂಗಡಿ: ಮದ್ರಸಾ ಶಾಲೆಯ ಉಸ್ತಾದ್ ನಿಂದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಮದ್ರಸಾ ಶಾಲೆಯ ಉಸ್ತಾದ್ ಒಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ನೀಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪುತ್ತಿಲದಲ್ಲಿ ಬೆಳಕಿಗೆ ಬಂದಿದೆ.

 

ಪುತ್ತಿಲ ಗ್ರಾಮದ ಕುಂಡಡ್ಕ ನಿವಾಸಿ ಮಹಿಳೆಯೊಬ್ಬರ ಇಬ್ಬರು ಹೆಣ್ಣು ಮಕ್ಕಳು ಕುಂಡಡ್ಕದ ಮದ್ರಸಾ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಜನವರಿ 28 ರಾತ್ರಿಯ ವೇಳೆ ಶಾಲೆ ಮುಗಿಸಿ ಮಕ್ಕಳಿಬ್ಬರು ಮನೆಗೆ ಬಂದು ತಾಯಿಗೆ ಉಸ್ತಾದ್ ಮಾಡಿರುವ ನೀಚ ಕೆಲಸದ ಬಗ್ಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಹೆಣ್ಣು ಮಕ್ಕಳು ಧರಿಸಿದ್ದ ಬಟ್ಟೆ ಸರಿಸಿ ಮೈ ಮುಟ್ಟಿ ದೇಹವೆಲ್ಲ ಸವರಿದ್ದಲ್ಲದೇ ಅಪ್ಪಿ ಹಿಡಿದಿರುವುದಾಗಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಏನಾದರೂ ಕಾರಣ ಹೇಳಿ ಉಸ್ತಾದ್ ನ ರೂಮಿಗೆ ಕರೆಸಿಕೊಂಡು ಜನನಾಂಗವನ್ನು ಮುಟ್ಟಿಸುತ್ತಾರೆ ಎಂದು ದೂರಿದ್ದಾರೆ.
ಕಳೆದ ಒಂದು ವರ್ಷದಿಂದ ಈ ರೀತಿ ಅಸಭ್ಯವಾಗಿ ವರ್ತಿಸಿರುವುದಾಗಿ ಹೆಣ್ಣು ಮಕ್ಕಳು ಹೇಳಿದ್ದಾರೆ ಎನ್ನಲಾಗಿದೆ.

ಬಾಲಕಿಯ ತಾಯಿ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದ್ಯ ಆರೋಪಿ ಉಸ್ತಾದ್ ವಿರುದ್ಧ ಭಾರತೀಯ ದಂಡ ಸಂಹಿತೆ 1860 (U/s -354 A ಹಾಗೂ 2012) ರ ಕಾಯ್ದೆಯಡಿ ಪುತ್ತೂರು ಮಹಿಳಾ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಿಸಲಾಗಿದೆ.

Leave A Reply

Your email address will not be published.