ಭೀಕರ ರಸ್ತೆ ಅಪಘಾತ-ಮದುವೆ ಮುಗಿಸಿ ಬರುತ್ತಿದ್ದ ಒಂಭತ್ತು ಮಂದಿ ಸ್ಥಳದಲ್ಲೇ ಸಾವು

ಆಂಧ್ರಪ್ರದೇಶ: ರಾಜ್ಯದ ಅನಂತಪುರ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಒಂಭತ್ತು ಮಂದಿ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಆರು ಮಂದಿ ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿ ಒಂಬತ್ತು ಮಂದಿ ಮೃತಪಟ್ಟಿದ್ದು, ಮೃತರೆಲ್ಲರೂ ಒಂದೇ ಕುಟುಂಬದವರೆಂದು ತಿಳಿದುಬಂದಿದೆ.

ಈ ಬಗ್ಗೆ ಉರುವಾಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.