ಸಾವಿನಲ್ಲೂ ಒಂದಾಗಿ ದುರಂತ ಅಂತ್ಯ ಕಂಡ ಹದಿಹರೆಯದ ಪ್ರೀತಿ!! ಪಿಯುಸಿ ವಿದ್ಯಾರ್ಥಿ-ವಿದ್ಯಾರ್ಥಿನಿ ಸಾವಿಗೆ ಶರಣು!!

Share the Article

ಮಂಡ್ಯ: ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾದ ಘಟನೆ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ.

ಮೃತರನ್ನು ರಶ್ಮಿ(17) ಹಾಗೂ ಶಶಾಂಕ್(18)ಎಂದು ಗುರುತಿಸಲಾಗಿದ್ದು, ಇಬ್ಬರೂ ಒಂದೇ ಕಾಲೇಜಿನಲ್ಲಿ ಓದುತ್ತಿದ್ದೂ, ಕಳೆದ ಎರಡು ವರ್ಷಗಳಿಂದ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು.

ಶನಿವಾರ ಸಂಜೆ ಹೊತ್ತಿಗೆ ವಿದ್ಯಾರ್ಥಿನಿ ರಶ್ಮಿ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟ ಸುದ್ದಿ ತಿಳಿದ ಬಾಲಕ ಶಶಾಂಕ್ ಕೂಡಾ ವಿಷ ಸೇವಿಗೆ ಸಾವಿಗೆ ಶರಣಾಗಿದ್ದಾನೆ.

ಇಬ್ಬರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply