ಒಂದೇ ದಿನದಲ್ಲಿ ಫೇಸ್‌ಬುಕ್‌ಗೆ 16 ಲಕ್ಷ ಕೋಟಿ ರೂ. ನಷ್ಟ

18 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಫೇಸ್ ಬುಕ್ ಸಕ್ರಿಯ ಬಳಕೆದಾರರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡುಬಂದಿದೆ. 3 ತಿಂಗಳ ಅವಧಿಯಲ್ಲಿ ಬಳಕೆದಾರರ ಸಂಖ್ಯೆ 192.9 ಕೋಟಿಗೆ ಕುಸಿದಿದ್ದು, ಈ ಹಿಂದಿನ ತ್ರೈಮಾಸಿಕ ಅವಧಿಯಲ್ಲಿ 193 ಕೋಟಿಯಷ್ಟು ಬಳಕೆದಾರರಿದ್ದರು ಎಂದು ಮಾತೃಸಂಸ್ಥೆ ಮೆಟಾ ಫೇಸ್‌ಬುಕ್ ಸಂಸ್ಥೆಯ ಬಹಿರಂಗಪಡಿಸಿದೆ.

ಮೆಟಾ ಹಣಕಾಸು ಅಧಿಕಾರಿ ಡೇವಿಡ್ ವೆಹಾರ್ ಹೇಳುವ ಪ್ರಕಾರ – ಭಾರತದಲ್ಲಿ ಡೇಟಾ ಪ್ಯಾಕೇಜ್ ಬೆಲೆಯಲ್ಲಿನ ಹೆಚ್ಚಳವಾಗಿದೆ. ಹೀಗಾಗಿ ಒಟ್ಟಾರೆಯಾಗಿ ದೇಶದಾದ್ಯಂತ ಫೇಸ್‌ಬುಕ್ ಬಳಕೆದಾರರ ಸಂಖ್ಯೆಯು ಕೂಡ ಕಡಿಮೆಯಾಗುತ್ತಾ ಬರುತ್ತಿದೆ.

ನಾವು ಈ ಅಂಶಗಳ ಜೊತೆಗೆ ಸ್ಪರ್ಧೆಯನ್ನು ಮಾಡಬೇಕಾಗಿದೆ. ಈ ಬೆಳವಣೆಗೆ ಹೊಸ ಬಳಕೆದಾರರ ಮೇಲೆ ನೆಗಿಟಿವ್ ಪ್ರಭಾವಬೀರುತ್ತದೆ ಎಂದು ಹೇಳಿದ್ದಾರೆ. ಮೆಟಾ ಸಂಸ್ಥೆ ವರ್ಚುವಲ್ ರಿಯಾಲಿಟಿ ಮೇಲೆ ಹೆಚ್ಚಿನ ಹೂಡಿಕೆ ಮಾಡಿದೆ.

ಟಿಕ್ಟಾಕ್ ಮತ್ತು ಯೂಟ್ಯೂಬ್‌ನಿಂದ ಹೆಚ್ಚಿದ ಸ್ಪರ್ಧೆ ನೀಡುತ್ತಿದೆ. ಇದರಿಂದ ಫೇಸ್‌ಬುಕ್‌ ಜಾಹೀರಾತುಗಳು ಕಡಿಮೆಯಾಗಬಹುದಾದ ಸಾಧ್ಯತೆಯಿದೆ ಎಂದು ಕಂಪನಿ ತಿಳಿಸಿದೆ.

Leave A Reply

Your email address will not be published.