ಉಡುಪಿ:ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾದ ಕಾರು|ಕುಂದಾಪುರ ಮೂಲದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

Share the Article

ಉಡುಪಿ:ರಸ್ತೆ ಬದಿಯ ಮರಕ್ಕೆ ಕಾರು ಢಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ಮೂವರಿಗೂ ಗಾಯಗಳಾಗಿರುವ ಘಟನೆ ನಿನ್ನೆ ತಡರಾತ್ರಿ ಶ್ರೀರಂಗಾಪುರದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ಅಪಘಾತ ಸಂಭವಿಸಿದ್ದು,ಒಂದೇ ಕುಟುಂಬದ ಸದಸ್ಯರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು.ಈ ವೇಳೆ ರಸ್ತೆ ಬದಿಯ ಮರಕ್ಕೆ ಕಾರು ಢಿಕ್ಕಿಯಾಗಿ ಈ ಘಟನೆ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಅಸುನೀಗಿದ್ದು,ಮೃತರನ್ನು ಕುಂದಾಪುರ ಮೂಲದ 32 ವರ್ಷದ ಗೀತಾ, 60ವರ್ಷದ ಶಾರದಾ ಮತ್ತು 5 ವರ್ಷದ ಬಾಲಕಿ ಧೃತಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಾಗೇಶ (65), ದಯಾನಂದ (66), ಸುಧೀಂದ್ರ (35) ಎಂಬವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave A Reply