ಉತ್ತರಖಾಂಡ ಚುನಾವಣೆಗೆ 11 ಅಂಶಗಳ ಭರವಸೆಗಳ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಕ್ಷ ಸಂಚಾಲಕ ಕೇಜ್ರಿವಾಲ್| ಉಚಿತ ವಿದ್ಯುತ್, ನಿರುದ್ಯೋಗ ಭತ್ಯೆ ಸೇರಿದಂತೆ ಹಲವು ಸವಲತ್ತು

ಹರಿದ್ವಾರ : ಎಲ್ಲರಿಗೂ ಉಚಿತ ಗುಣಮಟ್ಟದ ಶಿಕ್ಷಣ, ವೈದ್ಯಕೀಯ ಚಿಕಿತ್ಸೆ, ನಿರುದ್ಯೋಗ ಭತ್ಯೆ ಹಾಗೂ ಉಚಿತ ವಿದ್ಯುತ್ ಸೇರಿದಂತೆ 11 ಅಂಶಗಳ ಕಾರ್ಯಸೂಚಿಯನ್ನು ಬಿಡುಗಡೆಗೊಳಿಸಿದ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕ್ರೇಜಿವಾಲ್ ಅವರು ಉತ್ತರಾಖಾಂಡದಲ್ಲಿ ಆಮ್ ಆದ್ಮಿ ಪಕ್ಷ ( ಎಎಪಿ) ಅಧಿಕಾರಕ್ಕೆ ಬಂದರೆ ಈ ಎಲ್ಲಾ ಭರವಸೆಗಳ ಜೊತೆಗೆ ಭ್ರಷ್ಟಾಚಾರವನ್ನು ಕೊನೆಗೊಳಿಸುವುದಾಗಿ ಭರವಸೆಯನ್ನು ನೀಡಿದ್ದಾರೆ.

 

ಉತ್ತರಾಖಂಡದಲ್ಲಿ ಇಲ್ಲಿಯವರೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರಗಳು ರಾಜ್ಯವನ್ನು ಲೂಟಿ ಮಾಡುತ್ತಿವೆ ಎಂದು ಆರೋಪ ಮಾಡಿದ್ದಾರೆ.

ಐದು ರಾಜ್ಯ‌ಗಳ‌ ವಿಧಾನಸಭೆ ಚುನಾವಣಾ ಕಣದಲ್ಲಿರುವ ಗುಡ್ಡಗಾಡು ರಾಜ್ಯ ಉತ್ತರಾಖಂಡವನ್ನು ಹಿಂದೂಗಳ ಅಂತರರಾಷ್ಟ್ರೀಯ ಆಧ್ಯಾತ್ಮಿಕ ರಾಜಧಾನಿಯನ್ನಾಗಿ ಮಾಡುವುದಾಗಿ ಇಂದು ಹರಿದ್ವಾರದಲ್ಲಿ ತಮ್ಮ‌ಪಕ್ಷದ ಪರ ಪ್ರಚಾರಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ‌ ಮಾತನಾಡುತ್ತಾ ಹೇಳಿದರು.

Leave A Reply

Your email address will not be published.