ಪ್ರಥಮ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ| ಪಿಯುಸಿ ವಾರ್ಷಿಕ ಮತ್ತು ಪೂರಕ ಪರೀಕ್ಷೆ ದಿನಾಂಕ ಪ್ರಕಟ|

Share the Article

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್ 28 ರಿಂದ ಎಪ್ರಿಲ್ 13 ರವರೆಗೆ ಮಧ್ಯಾಹ್ನ 2.30 ರಿಂದ 5.45 ರ ಅವಧಿಯಲ್ಲಿ ನಡೆಸಬೇಕು ಎಂದು ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಎಪ್ರಿಲ್ 20 ರೊಳಗೆ ಮೌಲ್ಯಮಾಪನವನ್ನು ಪೂರ್ಣಗೊಳಿಸಿ ಆಯಾ ಕಾಲೇಜಿನಲ್ಲಿ 30 ರಂದು ಫಲಿತಾಂಶ ಪ್ರಕಟಿಸಬೇಕು. ಮೇ 16 ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನಾಂಕವಾಗಿದೆ.

ಮೇ 25 ರಿಂದ ಜೂನ್ 6 ರವರೆಗೆ ಪೂರಕ ಪರೀಕ್ಷೆಗಳನ್ನು ನಡೆಸಬೇಕು. ಜೂನ್ 15 ರಂದು ಫಲಿತಾಂಶ ಪ್ರಕಟಿಸಬೇಕೆಂದು ತಿಳಿಸಲಾಗಿದೆ.

ಪ್ರಶ್ನೆಪತ್ರಿಕೆಗಳ ತಯಾರಿ ಮತ್ತು ಮುದ್ರಣ ಕಾರ್ಯವನ್ನು ಜಿಲ್ಲಾ ಹಂತದಲ್ಲಿ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿಯೇ ನಡೆಸಲು ಸೂಚಿಸಲಾಗಿದೆ. ನೋಡಲ್ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಇಟ್ಟು, ವೇಳಾಪಟ್ಟಿಗೆ ಅನುಗುಣವಾಗಿ ಪ್ರಶ್ನೆ ಪತ್ರಿಕೆಗಳನ್ನು ಕಾಲೇಜುಗಳ ಪ್ರಾಂಶುಪಾಲರಿಗೆ ನೀಡಲು ನಿರ್ದೇಶಕರು ತಿಳಿಸಿದ್ದಾರೆ.

ಪ್ರಥಮ ಪಿಯುಸಿ ವಾರ್ಷಿಕ ಮತ್ತು ಪೂರಕ ಪರೀಕ್ಷೆಗಳನ್ನು ಜಿಲ್ಲಾಮಟ್ಟದಲ್ಲಿ ನಡೆಸುವಂತೆ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚಿಸಿದ್ದಾರೆ.

Leave A Reply