ಧಮ್ ಇದ್ರೆ ನಿಮ್ಮ ಮಸೀದಿಗೆ ಮುಸ್ಲಿಂ ಮಹಿಳೆಯರಿಗೆ ಪ್ರವೇಶ ಕೊಡಿಸಿ – ಶಾಸಕಿ ಖನೀಜಾ ಫಾತಿಮಾಗೆ ಈಶ್ವರಪ್ಪ ಸವಾಲು
ಮೈಸೂರು : ಶಾಸಕಿ ಫಾತಿಮಾ ಅವರಿಗೆ ಸಚಿವ ಕೆ ಎಸ್ ಈಶ್ವರಪ್ಪ ಅವರು ಧಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ ಎಂದು ಸವಾಲಾಕಿದ್ದಾರೆ.
ಹಿಜಬ್ ಧರಿಸಿ ಅಧಿವೇಶನಕ್ಕೆ ಬರುವೆ ಎಂದು ಶಾಸಕಿ ಹೇಳಿಕೆ ವಿಚಾರವಾಗಿ ಸಚಿವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.
ಮೊದಲು ನೀವು ಮಸೀದಿಗೆ ಹೋಗಿ. ಎಷ್ಟು ಜನ ಮಹಿಳೆಯರಿಗೆ ಮಸೀದಿಗೆ ಹೋಗಲು ಅವಕಾಶ ಇದೆ ಎಂದು ಪ್ರಶ್ನಿಸಿದ್ದಾರೆ.
ನಾವು ಶಾಲೆಗೆ ಹಿಜಬ್ ಧರಿಸಿ ಹೋಗಲು ನಿಷೇಧಿಸಿದ್ದೇವೆಯೇ ಹೊರತು ಹೊರಗಡೆಗೆ ಅಲ್ಲ. ಬೇರೆ ಎಲ್ಲಾ ಕಡೆ ಹಾಕಿಕೊಂಡು ಹೋಗಬಹುದು ಎಂದಿದ್ದಾರೆ.
ಸಿಎಂ ಇಬ್ರಾಹಿಂ ಹೇಳಿಕೆಗೆ ಕೂಡಾ ಪ್ರತಿಕ್ರಿಯಿಸಿದ ಈಶ್ವರಪ್ಪ ಅವರು, ಇದು ವಿಕೃತಿಯಿಂದ ಕೂಡಿದ ಹೇಳಿಕೆ. ಇದು ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ. ಅವರ ಮುಖ ನೋಡಲು ಹಿಜಬ್ ತೆಗೆಯಬೇಕಾ? ಇಬ್ರಾಹಿಂ ಅವರ ಈ ಹೇಳಿಕೆ ಯಾರೂ ಒಪ್ಪುವಂತದಲ್ಲ. ಸಮವಸ್ತ್ರ ದ ಹಿನ್ನೆಲೆಯಿಂದ ಈ ಆದೇಶ ಮಾಡಲಾಗಿದೆ ಎಂದಿದ್ದಾರೆ.