ಬೆಳ್ತಂಗಡಿ: ಉಜಿರೆಯ ಬಾರೊಂದರ ಸೆಕ್ಯೂರಿಟಿ ಗಾರ್ಡ್ ಕುಸಿದು ಬಿದ್ದು ಸಾವು

ಬೆಳ್ತಂಗಡಿ :ಉಜಿರೆಯ ಬಾರೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.

 

ಮೃತರನ್ನು ಕುಮಾರ್ (55) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬೆಂಗಳೂರಿನವರಾಗಿದ್ದು ಕೆಲಸದ ನಿಮಿತ್ತ ಉಜಿರೆಯಲ್ಲಿ ನೆಲೆಯಾಗಿದ್ದರು.

ಲಿಫ್ಟ್ ನ ಖಾಲಿ ಪ್ಯಾಸೇಜ್ ನಲ್ಲಿ ಕೂತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದ್ದು,ಇಂದು ಮುಂಜಾನೆ ಬೆಳಕಿಗೆ ಬಂದಿದೆ.ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

Leave A Reply

Your email address will not be published.