ಬಂಟ್ವಾಳ : ರಸ್ತೆ ದಾಟಲು ನಿಂತ ಮಹಿಳೆಗೆ ಬೈಕ್ ಡಿಕ್ಕಿ| ಪಾದಾಚಾರಿ ಮಹಿಳೆ ಸ್ಥಳದಲ್ಲೇ ಸಾವು|

ಬಂಟ್ವಾಳ : ಪಾದಾಚಾರಿ ಮಹಿಳೆಯೊಬ್ಬರಿಗೆ ಅಪರಿಚಿತ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಪಾದಾಚಾರಿ ಮಹಿಳೆ ತೀವ್ರಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮಂಗಳವಾರ ಸಂಜೆ ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ನಲ್ಲಿ ಈ ಘಟನೆ ನಡೆದಿದೆ.

ರಸ್ತೆ ದಾಟಲು ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಿಂತಿದ್ದ ಮಹಿಳೆಗೆ ಮಂಗಳೂರು ಕಡೆಯಿಂದ ಬಂದ ಅಪರಿಚಿತ ಬೈಕೊಂದು ಡಿಕ್ಕಿ ಹೊಡೆದು ಬಳಿಕ ಪರಾರಿಯಾಗಿದೆ. ಈ ಸಮಯದಲ್ಲಿ ಬೈಕ್ ಡಿಕ್ಕಿಹೊಡೆದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೆಲ್ಕಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಗೆ ಕಾರಣವಾದ ಬೈಕ್ ಹಾಗೂ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

Leave A Reply

Your email address will not be published.