ವೈದ್ಯಕೀಯ ಶಿಕ್ಷಣಕ್ಕಾಗಿ ಸಿಂಚನಾಲಕ್ಷ್ಮೀ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆ

ಪುತ್ತೂರು: 2021ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮೀ ಎಂಬಿಬಿಯಸ್ ವೈದ್ಯಕೀಯ ಶಿಕ್ಷಣಕ್ಕಾಗಿ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆಗೊಂಡಿದ್ದಾರೆ. ಈಕೆ ನೀಟ್ ಪರೀಕ್ಷೆಯಲ್ಲಿ ಪಿಡಬ್ಲ್ಯೂಡಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ಎರಡನೇ ರ‍್ಯಾಂಕ್ ಗಳಿಸಿದ್ದರು. ತನ್ನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ಪೂರೈಸಿರುವ ಸಿಂಚನಾಲಕ್ಷ್ಮೀ ಪುತ್ತೂರಿನ ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿಗಳ ಪುತ್ರಿ.

 

Leave A Reply

Your email address will not be published.