ಬ್ಯಾಂಕ್ ಗಳಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ|ದೇಶದ 12 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ವರ್ಷವೇ ನಡೆಯಲಿದೆ ನೇಮಕಾತಿ

ಬೆಂಗಳೂರು :ಬ್ಯಾಂಕ್ ಗಳಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ದೇಶದ 12 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ವರ್ಷವೇ ನೇಮಕಾತಿ ನಡೆಯಲಿದೆ.

ಬ್ಯಾಂಕುಗಳಲ್ಲಿ ಖಾಲಿ ಇರುವ 41,177 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) ನಾನಾ ನೇಮಕಾತಿ ಪರೀಕ್ಷೆಗಳ ಸಂಭವನೀಯ ವೇಳಾಪಟ್ಟಿ ಪ್ರಕಟಿಸಿದೆ.ಐಬಿಪಿಎಸ್ 12 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 11 ಬ್ಯಾಂಕ್ ಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ.

ಐಬಿಪಿಎಸ್ ದೇಶದ ವಿವಿಧ ಬ್ಯಾಂಕುಗಳಲ್ಲಿನ ಪ್ರೊಬೆಷನರಿ ಆಫೀಸರ್\ಮ್ಯಾನೇಜ್ ಮೆಂಟ್ ಟ್ರೇನಿ, ಕ್ಲರಿಕಲ್ ಕೇಡರ್ ನ ಹುದ್ದೆಗಳು ಹಾಗೂ ಸ್ಪೆಷಲಿಸ್ಟ್ ಆಫೀಸರ್ ನೇಮಕಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಿದೆ. ಅಲ್ಲದೇ ದೇಶದ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಆಫೀಸರ್ ಹಾಗೂ ಆಫೀಸರ್ ಅಸಿಸ್ಟೆಂಟ್ಸ್ ನೇಮಕಕ್ಕೂ ಪರೀಕ್ಷೆ ನಡೆಸಲಾಗುವುದು ಎಂದು ಐಬಿಪಿಎಸ್ ತಿಳಿಸಿದೆ.

Leave A Reply

Your email address will not be published.