ಹಿಜಾಬ್ ವಿವಾದ : ಪೂರ್ಣಪೀಠದ ಅಂಗಳದಲ್ಲಿ ಇಂದು ಮಧ್ಯಾಹ್ನವೇ ವಿಚಾರಣೆ ಆರಂಭ

ಬೆಂಗಳೂರು : ಹಿಜಾಬ್ ಗೆ ( ಶಿರವಸ್ತ್ರ) ಸಂಬಂಧಿಸಿದಂತೆ ದಾಖಲಿಸಲಾಗಿರುವ ರಿಟ್ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ‌ ನೇತೃತ್ವದಲ್ಲಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಹಾಗೂ ಮಹಿಳಾ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಇವರನ್ನುಗಳನ್ನೊಳಗೊಂಡ ಮೂವರು ನ್ಯಾಯಮೂರ್ತಿಗಳ‌ ಸಾಂವಿಧಾನಿಕ ಪೂರ್ಣಪೀಠ ಗುರುವಾರ ಮಧ್ಯಾಹ್ನ ವಿಚಾರಣೆಗೆ ಕೈಗೆತ್ತಿಗೊಳ್ಳಲಿದೆ.

 

ಏಳು ರಿಟ್ ಹಾಗೂ ಎರಡು ಮಧ್ಯಂತರ ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಪ್ರಕರಣವು ಸಾಂವಿಧಾನಿಕವಾದ ಸಾಕಷ್ಟು ಸೂಕ್ಷ್ಮ ಅಂಶಗಳನ್ನು ಒಳಗೊಂಡಿರುವ ಕಾರಣ ಇವುಗಳ ವಿಚಾರಣೆ ವಿಸ್ತ್ರತ ನ್ಯಾಯಪೀಠದಲ್ಲೇ ನಡೆಯುವುದು ಒಳಿತು ಎಂದು ಹೇಳಿದರು.

Leave A Reply

Your email address will not be published.