ರಾಜ್ಯಾದ್ಯಂತ ಶಾಲೆ ಪ್ರಾರಂಭದ ಬಗ್ಗೆ ಸಿಎಂ ಬಸವರಾ ಬೊಮ್ಮಾಯಿ ಮಹತ್ವದ ಮಾಹಿತಿ | ಮೊದಲನೇ ಹಂತದಲ್ಲಿ ಸೋಮವಾರದಿಂದ 8-10 ನೇ ತರಗತಿಯವರಿಗೆ ಶಾಲೆ ಆರಂಭ| ಎರಡನೇ ಹಂತದಲ್ಲಿ ಪಿಯುಸಿ ಮತ್ತು ಡಿಗ್ರಿ ಕಾಲೇಜು ಪ್ರಾರಂಭ

ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಒಂದು ಕಡೆ ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ ಮೂರು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿತ್ತು.

ಇವತ್ತು ಮುಂದಿನ ಆದೇಶದವರೆಗೆ ಧಾರ್ಮಿಕ ಗುರುತು ಬಳಸುವಂತಿಲ್ಲ. ಹಿಜಾಬ್ ಶಲ್ಯ ಧರಿಸಿ ಶಾಲಾ ಕಾಲೇಜುಗಳಿಗೆ ಬರುವಂತಿಲ್ಲ. ಶಾಲಾ ಕಾಲೇಜುಗಳು ಆದಷ್ಟು ಬೇಗ ಪ್ರಾರಂಭ ಆಗಲಿ ಎಂದು ತ್ರಿಸದಸ್ಯ ಪೀಠ ಮೌಖಿಕವಾಗಿ ಹೇಳಿದೆ.

ಇಂದು ಸಂಜೆ ನಡೆದ ಸಿ ಎಂ ನೇತೃತ್ವದ ಮಹತ್ವದ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥ್ ನಾರಾಯಣ, ಗೃಹ ಸಚಿವ ಅರಗ ಜ್ಞಾನೇಂದ್ರ ಭಾಗವಹಿಸಿದ್ದರು.

ಇದೀಗ ಈ ರಜೆ ಅವಧಿ ಮುಗಿದಿದೆ. ಹೈಕೋರ್ಟ್ ಆದೇಶದ ಹಿನ್ನೆಲೆ ಇಂದು ಸಂಜೆ ಶಾಲಾ ಕಾಲೇಜುಗಳ ರಜೆ ವಿಸ್ತರಣೆ ಕುರಿತು ಶಿಕ್ಷಣ ಸಚಿವರು ಮತ್ತು ಗೃಹಸಚಿವರ ಜೊತೆ ಸಭೆ ನಡೆಸಿದ ಸಿ ಎಂ ಬಸವರಾಜ ಬೊಮ್ಮಾಯಿಯವರು ಸಭೆ ನಡೆಸಿದ್ದಾರೆ.

ಮೊದಲನೇ ಹಂತದಲ್ಲಿ ಸೋಮವಾರದಿಂದ 10 ನೇ ತರಗತಿಯವರಿಗೆ ಶಾಲೆ ಆರಂಭ ಎಂದಿದ್ದಾರೆ. ಎರಡನೇ ಹಂತದಲ್ಲಿ ಪಿಯುಸಿ ಮತ್ತು ಡಿಗ್ರಿ ಕಾಲೇಜು ಪ್ರಾರಂಭ ಮಾಡುವುದಾಗಿ ಸಿಎಂ ಹೇಳಿದ್ದಾರೆ

Leave A Reply

Your email address will not be published.