ಪಿಯುಸಿ , ಪದವಿ ಕಾಲೇಜುಗಳಿಗೆ ಫೆ.16 ರವರೆಗೂ ರಜೆ|ಡಾ.ಸಿ ಎನ್ ಅಶ್ವತ್ಥ್ ನಾರಾಯಣ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ನಡೆದಿರುವ ಹಿಜಾಬ್ ಪ್ರಕರಣದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯ ಫೆ. 16 ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಶುಕ್ರವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದಾರೆ‌. ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ವಿಶ್ವವಿದ್ಯಾಲಯಗಳು, ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ‌.

ಆನ್ಲೈನ್ ಕ್ಲಾಸ್ ಈ ಸಮಯದಲ್ಲಿ ಎಂದಿನಂತೆ ನಡೆಯಲಿದೆ. ಹಾಗೆಯೇ ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave A Reply

Your email address will not be published.