ಬಂಟ್ವಾಳ : ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿತದ ಪ್ರಕರಣ| ಇಬ್ಬರು ಆರೋಪಿಗಳ ಬಂಧನ!

Share the Article

ಬಂಟ್ವಾಳ : ಬಾರೊಂದರಲ್ಲಿ ಕುಡಿದು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ.

ಕಾವಳ ಮುಡೂರು ನಿವಾಸಿ ಪುರುಷ ಯಾನೆ ಪುರುಷೋತ್ತಮ ಹಾಗೂ ಬಿ.ಕಸಬಾ ನಿವಾಸಿ ಧನುಷ್ ಯಾನೆ ಧನಂಜಯ ಬಂಧಿತ ಆರೋಪಿಗಳು.

ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಫೆ‌.9 ರಂದು ಕ್ಷುಲ್ಲಕ ಕಾರಣಕ್ಕೆ ಈ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಚೂರಿಯಿಂದ ಇರಿದು ಗಲಾಟೆ ಮಾಡಿಕೊಂಡಿದ್ದಾರೆ. ಇದರ ಪರಿಣಾಮ ಚೂರಿ ಇರಿತಕ್ಕೊಳಗಾದ ಕಿಶೋರ್ ಹಾಗೂ ದಯಾನಂದ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅರ್ಬಿಗುಡ್ಡೆ ನಿವಾಸಿಗಳಾದ ಸುಚಿತ್, ಸಚಿನ್, ಧನು ಹಾಗೂ ಪುರುಷ ವಿರುದ್ಧ ಪ್ರಕರಣ ದಾಖಲಾಗಿತ್ತು.

Leave A Reply