ಹಿಜಾಬ್ ವಿವಾದ : ವಿಚಾರಣೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ| ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿದಿದೆ.
ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ ವಿಚಾರಣೆ ನಡೆದಿದೆ.
ಸಮವಸ್ತ್ರ ನೀತಿ ಜಾರಿ ಇರುವ ಶಾಲೆ ಕಾಲೇಜುಗಳಲ್ಲಿ ತರಗತಿಗೆ ಹಾಜರಾಗುವಾಗ ಹಿಜಾಬ್, ಕೇಸರಿ ಶಾಲು ಧರಿಸುವಂತಿಲ್ಲ ಈ ಕುರಿತಂತೆ ಸಲ್ಲಿಕೆಯಾದ ತಕರಾರು ಅರ್ಜಿಗಳ ವಿಚಾರಣೆ ಇಂದು ನಡೆದಿತ್ತು.
ಆರ್ಟಿಕಲ್ 25 ರ ಪ್ರಕಾರ ಶಿರವಸ್ತ್ರ ಧರಿಸುವುದು ತಪ್ಪಲ್ಲ ಎಂದು ಅರ್ಜಿದಾರ ವಿದ್ಯಾರ್ಥಿನಿಯರ ಪರ ವಕೀಲ ದೇವದತ್ ಕಾಮತ್ ವಾದ ಮಂಡಿಸಿದ್ದಾರೆ. ಹಲವು ವಿಚಾರಗಳನ್ನು ಉಲ್ಲೇಖಿಸಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ವಾದ ಪ್ರತಿವಾದವನ್ನು ಆಲಿಸಿದ ತ್ರಿಸದಸ್ಯ ಹೈಕೋರ್ಟ್ ಹಿಜಾಬ್ ವಿವಾದವನ್ನು ನಾಳೆಗೆ ಮುಂದೂಡಿದೆ. ನಾಳೆ ಮಧ್ಯಾಹ್ನ 2.30 ಕ್ಕೆ ಮತ್ತೆ ವಾದ ಪ್ರತಿವಾದ ನಡೆಯಲಿದೆ.