ಮಂಗಳೂರು : ಮುಕ್ಕ ಬಳಿ ಮೀನು ಸಾಗಾಟದ ಲಾರಿ ಪಲ್ಟಿ!!!

ಮುಲ್ಕಿ : ಮೀನು ಸಾಗಾಟದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66 ರ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಪಲ್ಟಿಯಾಗಿದೆ. ಈ ಘಟನೆ ನಿನ್ನೆ ರಾತ್ರಿ ನಡೆದಿದೆ.

ಹೆದ್ದಾರಿ ಸಂಚಾರ ಇದರಿಂದ ಅಸ್ತವ್ಯಸ್ತಗೊಂಡಿದ್ದು, ಬಳಿಕ ಸಂಚಾರ ಉತ್ತರ ಠಾಣೆಯ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಮೀನಿನ ಎಣ್ಣೆ ತೆಗೆಯುವ ಕಾರ್ಖಾನೆಗೆ ಕೊಳೆತ ಮೀನುಗಳನ್ನು ಈ ಲಾರಿಯಲ್ಲಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಮುಕ್ಕ ಬಳಿ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದೆ

ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

Leave A Reply

Your email address will not be published.