ಆನ್ಲೈನ್ ಗೇಮಿಂಗ್ ಗೆ ಹೈಕೋರ್ಟ್ ನಿಂದ ಗ್ರೀನ್ ಸಿಗ್ನಲ್| ರಾಜ್ಯ ಸರಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು : ರಾಜ್ಯದಲ್ಲಿ ನಿಷೇಧಗೊಂಡಿದ್ದ ಆನ್ಲೈನ್ ಗೇಮಿಂಗ್ ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಇತ್ತೀಚೆಗಷ್ಟೇ ರಾಜ್ಯ ಸರಕಾರ ಆನ್ಲೈನ್ ಗೇಮಿಂಗ್ ನಿಷೇಧ ಮಾಡಿ ಆದೇಶ ಹೊರಡಿಸಿತ್ತು.
ಈ ಬಗ್ಗೆ ನಿಷೇಧ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ರಾಜ್ಯ ಸರಕಾರದ ಈ ಆದೇಶವನ್ನು ರದ್ದು ಪಡಿಸಿ, ಆನ್ಲೈನ್ ಗೇಮಿಂಗ್ ಗೆ ಅವಕಾಶ ನೀಡಿದೆ. ಸರಕಾರದ ಕ್ರಮ ಸಂವಿಧಾನ ಬದ್ಧವಲ್ಲ ಅಭಿಪ್ರಾಯಪಟ್ಟಿರುವ ಹೈಕೋರ್ಟ್ ಆನ್ಲೈನ್ ಗೇಮಿಂಗ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ ಸೂಕ್ತ ಶಾಸನ ರೂಪಿಸುವಂತೆ ತಿಳಿಸಿದೆ.
ಆನ್ಲೈನ್ ಜೂಜಾಟವನ್ನು ನಿಷೇಧಿಸುವ ಕಾನೂನು ಮಾಡಿದ್ದ ರಾಜ್ಯ ಸರಕಾರದ ವಿರುದ್ಧ ಗೇಮಿಂಗ್ ಕಂಪನಿಗಳು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ನಲ್ಲಿ ಮಾನ್ಯವಾಗಿದೆ. ಆನ್ಲೈನ್ ಜೂಜು ಹಾಗೂ ಬೆಟ್ಟಿಂಗ್ ನಿಷೇಧಿಸುವ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆ ತಿದ್ದುಪಡಿಗೆ 2021 ರಲ್ಲಿ ಅನುಮೋದನೆ ನೀಡಲಾಗಿತ್ತು.