ಅನ್ಯಕೋಮಿನ ಯುವಕನೊಂದಿಗೆ ಮಾತಾಡುತ್ತಿದ್ದಾಗ ಹಲ್ಲೆ ಮಾಡಿದ ತಂಡ | ತೀವ್ರ ಹಲ್ಲೆಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Share the Article

ಅನ್ಯಕೋಮಿನ ಸಹಪಾಠಿ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳ‌ ತಂಡವೊಂದು ಹಲ್ಲೆ ನಡೆಸಿರುವ ಘಟನೆತಯೊಂದು ಮಂಜೇಶ್ವರ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ಬಿಕಾಂ ವಿದ್ಯಾಭ್ಯಾಸ ಮಾಡುತ್ತಿರುವ ನೀಲೇಶ್ವರ ನಿವಾಸಿ ಮಂಜೇಶ್ವರ ಗೋವಿಂದ ಪೈ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಶ್ವತಿ ಎಂಬ ಯುವತಿ ತನ್ನ ಸಹಪಾಠಿಯಾಗಿದ್ದ ನಿಝಾರ್ ಜೊತೆ ರೈಲ್ವೇ ನಿಲ್ದಾಣದಲ್ಲಿ ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ತಂಡವೊಂದು ವಿದ್ಯಾರ್ಥಿಗಳಿಗೆ ಬೆದರಿಕೆಯೊಡ್ಡಿ ಹಲ್ಲೆ ಬೇರೆ ಮಾಡಿದ್ದಾರೆ.

ಈ ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಆಸ್ಪತ್ರೆಗೆ ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷದ್ ವರ್ಕಾಡಿ ಭೇಟಿ ನೀಡಿದ್ದಾರೆ.

Leave A Reply