ಬಿ.ಸಿರೋಡ್ :ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿ!! ಪ್ರಯಾಣಿಕರಿಗೆ ಗಾಯ-ಆಸ್ಪತ್ರೆಗೆ ದಾಖಲು

ಬಿ.ಸಿ ರೋಡ್:ಪ್ರಯಾಣಿಕರನ್ನು ಹೊತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರಾತ್ರಿ ಸಂಚಾರದ ಖಾಸಗಿ ಬಸ್ಸು ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪ ನಡೆದಿದೆ.

ತುಂಬೆ ಬಿಎ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ಸು ತಿರುವಿನಲ್ಲಿ ಮಗುಚಿ ಬಿದ್ದಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತುಂಬೆ ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.

ಬಸ್ ನ ಡೀಸೆಲ್ ಟ್ಯಾಂಕ್ ನಿಂದ ಡೀಸೆಲ್ ಸೋರಿಕೆಯಾದ ಪರಿಣಾಮ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಮುಂಜಾಗೃತ ಕ್ರಮ ಕೈಗೊಂಡಿದ್ದು, ಹೆಚ್ಚಿನ ಹಾನಿಯನ್ನು ತಪ್ಪಿಸಿದ್ದಾರೆ.

Leave A Reply

Your email address will not be published.