ದೇವಸ್ಥಾನಗಳಲ್ಲಿ ಗಂಟೆ,ಧ್ವನಿ ವರ್ಧಕಗಳನ್ನು ಬಳಸದಂತೆ ನಿರ್ಬಂಧ ವಿಧಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಧ್ವನಿ ವರ್ಧಕಗಳನ್ನು ಮಸೀದಿಗಳಲ್ಲಿ ಬಳಕೆ ಮಾಡದಂತೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದ ಬೆನ್ನಲ್ಲೇ ಅನೇಕ ಕಡೆಗಳಲ್ಲಿ ಬ್ರೇಕ್ ಹಾಕಲಾಗಿದ್ದು, ಇದೀಗ ರಾಜ್ಯ ಸರ್ಕಾರ ವಿವಿಧ ದೇವಸ್ಥಾನಗಳಲ್ಲಿ ಧ್ವನಿ ವರ್ಧಕ ಬಳಸದಂತೆ ನಿರ್ಬಂಧ ವಿಧಿಸಿದೆ.
ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರಿನ ಹಲವು ದೇವಸ್ಥಾನಗಳಿಗೆ ನೋಟಿಸ್ ಜಾರಿ ಮಾಡಿದ್ದು, ದೇವಸ್ಥಾನಗಳಲ್ಲಿ ನಿಗಧಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತ ಗಂಟೆ, ಜಾಗಟೆ, ಧ್ವನಿವರ್ಧಕ ಬಳಸದಂತೆ ಸೂಚಿಸಿದೆ. ಮಂಗಳಾರತಿ ಸಂದರ್ಭದಲ್ಲಿ ದೊಡ್ಡ ಮಟ್ಟದ ಗಂಟೆ ಶಬ್ದಗಳನ್ನು,ಡಮರುಗ ಸೇರಿದಂತೆ ಇನ್ನಿತರ ಸಾಧನಗಳ ಮೂಲಕ ಶಬ್ದ ಹೊರಡಿಸಲಾಗುತ್ತಿದೆ. ಇದು ಹೆಚ್ಚಿನ ಡೆಸಿಬಲ್ ಶಬ್ದವನ್ನು ಹೊರಸೂಸುತ್ತಿದ್ದು ಇವುಗಳನ್ನು ಬಳಕೆ ಮಾಡದಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.
ರಾಜ್ಯ ಧಾರ್ಮಿಕ ಇಲಾಖೆ ಬಸವನಗುಡಿಯ ದೊಡ್ಡಬಸವಣ್ಣ ದೇವಾಲಯ, ಕಲಾಸಿಪಾಳ್ಯದ ಮಿಂಟೋ ಆಂಜನೇಯ ದೇಗುಲ, ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನ, ದೊಡ್ಡಗಣಪತಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಗಂಟೆನಾಧಕ್ಕೆ ಬ್ರೇಕ್ ಹಾಕುವಂತೆ ನೋಟಿಸ್ ನಲ್ಲಿ ಸೂಚಿಸಿದೆ.