ಹಿರಿಯ ಕವಿ-ಕನ್ನಡದ ಹೆಮ್ಮೆ ನಾಡೋಜ ಚೆನ್ನವೀರ ಕಣವಿ ವಿಧಿವಶ

ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ಕಣವಿ ಅವರು ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಡೋಜ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ‌ ಚೆನ್ನವೀರ ಕಣವಿಯವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿತ್ತು.

ಕೊರೊನಾ ಸೋಂಕಿನಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು ಧಾರವಾಡದ ಎಸ್ ಡಿ ಎಂ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಚಿಕಿತ್ಸೆ ಸಂದರ್ಭದಲ್ಲಿ ಗೊತ್ತಾಗಿದೆ.

ಚೆನ್ನವೀರ ಕಣವಿಯವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿದ್ದರಿಂದ ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರಿಸಲಾಗಿತ್ತು. ಅವರ ಆರೋಗ್ಯದ ಬಗ್ಗೆ ಧಾರವಾಡ ಎಸ್ ಡಿ ಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಅವರ ಶ್ವಾಸಕೋಶದಲ್ಲಿ ಪ್ಯಾಚ್ ಕಾಣಿಸಿಕೊಂಡಿದ್ದು,ಐಸಿಯುನಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಿದ್ದಾಗಿ ತಿಳಿಸಿತ್ತು.

ಚನ್ನವೀರ ಕಣವಿ ಅವರ ಸೋಂಕಿನ ತೀವ್ರತೆ ಹೆಚ್ಚಾಗಿದ್ದ ಪರಿಣಾಮ ಶ್ವಾಸಕೋಶ ಉಸಿರಾಟದ ಶಕ್ತಿ ಕಳೆದುಕೊಂಡು ಆರೋಗ್ಯಸ್ಥಿತಿ ಚಿಂತಾಜನಕವಾಗಿತ್ತು. ಚನ್ನವಿರ ಕಣವಿ ಅವರು ಅಕ್ಯುಟ್ ರೆಸ್ಪಿರಟ್ರಿ ಸಿಂಡ್ರಮ್ ( ಎಆರ್ ಡಿಎಸ್) ನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾದ ವೇಳೆ ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.

ಈಗ ಚಿಕಿತ್ಸೆ ಫಲಕಾರಿಯಾಗದೆ ಚನ್ನವೀರ ಕಣವಿ ಅವರು ನಿಧನ ಹೊಂದಿದ್ದಾರೆ.

Leave A Reply

Your email address will not be published.