ಡ್ರಂಕ್ ಆಂಡ್ ಡ್ರೈವ್ ಪ್ರಕರಣದಲ್ಲಿ ನಟಿ ಕಾವ್ಯ ಬಂಧನ !! | ಕುಡಿದು ವಾಹನ ಚಲಾಯಿಸಿದ್ದಲ್ಲದೆ, ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್‌ ಮೇಲೆ ಹಲ್ಲೆ

ಇತ್ತೀಚಿಗೆ ಡ್ರಂಕ್ ಆಂಡ್ ಡ್ರೈವ್ ಕೇಸ್ ಗಳು ಹೆಚ್ಚಾಗುತ್ತಿದೆ. ಅದಲ್ಲದೆ ಸೆಲೆಬ್ರಿಟಿಗಳು ಈ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುತ್ತಿರುವುದು ಇದೀಗ ಮಾಮೂಲಾಗಿದೆ. ಅಂತೆಯೇ ಕುಡಿದು ವಾಹನ ಚಲಾಯಿಸಿದ್ದಲ್ಲದೇ, ಮಹಿಳಾ ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ಹಲ್ಲೆ ನಡೆಸಿದ ಆರೋಪದಡಿ ನಟಿ ಕಾವ್ಯ ಥಾಪರ್‌ರನ್ನು ಪೊಲೀಸರು ಬಂಧಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.

 

ಜೆಡಬ್ಲ್ಯೂ ಮ್ಯಾರಿಯಟ್‌ ಹೋಟೆಲ್‌ ಬಳಿ ಗುರುವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಜುಹು ಪೊಲೀಸರು ನಟಿಯನ್ನು ಬಂಧಿಸಿದ್ದಾರೆ. ನಟಿ ಅಲ್ಲಿಗೆ ಪಾರ್ಟಿಗಾಗಿ ಬಂದಿದ್ದರು. ತಮ್ಮ ಕಾರಿನಲ್ಲಿ ಸ್ನೇಹಿತನೊಂದಿಗೆ ಪೂರ್ವ ಉಪನಗರದಲ್ಲಿರುವ ತಮ್ಮ ನಿವಾಸಕ್ಕೆ ಹಿಂತಿರುಗುತ್ತಿದ್ದರು.

ಥಾಪರ್‌ ಮದ್ಯದ ಅಮಲಿನಲ್ಲಿದ್ದ ಕಾರಣ ಆಕೆ ತನ್ನ ಕಾರನ್ನು, ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾಳೆ. ಅಪಘಾತದ ಬಗ್ಗೆ ಪೊಲೀಸ್‌ ನಿಯಂತ್ರಣ ಕೊಠಡಿಗೆ ಮಾಹಿತಿ ಲಭಿಸಿದೆ. ಜುಹು ಪೊಲೀಸ್‌ ಠಾಣೆಯಿಂದ ನಿರ್ಭಯಾ ಸ್ಕ್ವಾಡ್‌ ಸ್ಥಳಕ್ಕೆ ಧಾವಿಸಿದೆ. ನಟಿ ಥಾಪರ್‌, ಮಹಿಳಾ ಪೇದೆಯೊಬ್ಬರ ಕಾಲರ್‌ ಹಿಡಿದು ಹಲ್ಲೆ ನಡೆಸಿದ್ದಾರೆ. ಈ ವೇಳೆ ಮಹಿಳಾ ಪೇದೆ ನೆಲದ ಮೇಲೆ ಬಿದ್ದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಟಿ ವಿರುದ್ಧ ಐಪಿಸಿ ಮತ್ತು ಮೋಟಾರು ವಾಹನಗಳ ಕಾಯ್ದೆಯಡಿ ಮದ್ಯಪಾನ ಮಾಡಿ ವಾಹನ ಚಾಲನೆ, ಸಾರ್ವಜನಿಕ ಸೇವಕರ ಕರ್ತವ್ಯ ನಿರ್ವಹಣೆಗೆ ಅಡ್ಡಿ ಪ್ರಕರಣ ದಾಖಲಿಸಲಾಗಿದೆ. ನಟಿಯನ್ನು ಅಂಧೇರಿಯ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Leave A Reply

Your email address will not be published.