ಬಂಟರ ಸಂಘ ಬಂಟ್ವಾಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ ಅಧಿಕಾರ ಸ್ವೀಕಾರ

ಬಂಟರ ಸಂಘ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ ಇಂದು ಅಧಿಕಾರ ಸ್ವೀಕರಿಸಿದರು.

 

ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ವಿವೇಕ್ ಶೆಟ್ಟಿ ನಗ್ರಿಗುತ್ತು, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ,ಉಪಾದ್ಯಕ್ಷ ಡಾ.ಪ್ರಶಾಂತ್ ಮಾರ್ಲ, ಜತೆ ಕಾರ್ಯದರ್ಶಿ ರಂಜನ್ ಶೆಟ್ಟಿ ಅರಳ,ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಕುಳ,ಜೊತೆ ಕೋಶಾಧಿಕಾರಿ ಪ್ರತಿಭಾ ರೈ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ನೂತನ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿಯವರು ಸಮಾಜದ ಏಳಿಗೆಗೆ ಪ್ರಾಮಾಣಿಕ ಕೆಲಸ ಮಾಡುವುದಲ್ಲದೆ ಇದೊಂದು ಸ್ಥಾನವಲ್ಲ ಜವಾಬ್ದಾರಿ ಎಂಬುದನ್ನು ಅರಿತು ಕೆಲಸ ಕಾರ್ಯಗಳನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ನಗ್ರಿಗುತ್ತು ವಿವೇಕ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮಹಿಳಾ ಸಮಿತಿಯ ಆಶಾ ಪಿ ರೈ,ಪದಾದಿಕಾರಿಗಳಾದ ಸುಮಾ ನವೀನ್ ಶೆಟ್ಟಿ, ಜ್ಯೋತಿ ಪಿ ಶೆಟ್ಟಿ, ಜಗದೀಶ್ ಶೆಟ್ಟಿ ಇರಾ ಉಪಸ್ಥಿತರಿದ್ದರು.ಕಿರಣ್ ಹೆಗ್ಡೆ ಸ್ವಾಗತಿಸಿ,ನವೀನ್ ಶೆಟ್ಟಿ ಮುಂಡಾಜೆಗುತ್ತು ವರದಿ ವಾಚಿಸಿ,ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

Leave A Reply

Your email address will not be published.