ಪುತ್ತೂರು- ಮಾಣಿ ಕಾರುಗಳೆರಡರ ಭೀಕರ ಅಪಘಾತ : ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಪುತ್ತೂರು : ಮಾಣಿ- ಮೈಸೂರು ಹೆದ್ದಾರಿಯ ಕಾವು ಸಮೀಪದ ಮಡ್ಯಂಗಲ ಎಂಬಲ್ಲಿ ಕಾರುಗಳೆರಡರ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.

 

ಈ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತಿಬ್ಬರು ತೀವ್ರ ಗಾಯಗೊಂಡಿದ್ದಾರೆ.

ಐ 10 ಕಾರು ಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ನಡೆದಿದ್ದು, ಅಪಘಾತದಲ್ಲಿ ಮೃತಪಟ್ಟ ಚಾಲಕನನ್ನು ಮಡಿಕೇರಿ ಮೂಲದ ರಾಜು ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಬಿಜೈ ಮೂಲದ ಜ್ಯೋತಿ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ನೇತ್ರಾವತಿ, ಬೇಬಿಪೂಜಾರಿ, ಚೇತನ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಿಫ್ಟ್ ಕಾರಿನ ಚಾಲಕ ಕೈಕಂಬ ಮೂಲದ ಮೊಯಿದ್ದೀನ್ ಕುಂಞ ಸಹಿತ ಹಲವರು ಗಾಯಗೊಂಡಿದ್ದಾರೆ.

ಬಿಜೈ ಮೂಲದ ಕುಟುಂಬ ತಲಕಾವೇರಿ ತೆರಳಿ ಅಲ್ಲಿಂದ ಮರಳಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.

Leave A Reply

Your email address will not be published.