ಕೃಷಿ ಕ್ಷೇತ್ರದತ್ತ ಆಸಕ್ತಿ ಇರುವವರಿಗೆ ಇಲ್ಲಿದೆ ಸುವರ್ಣಾವಕಾಶ !! | ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಿಂದ ಕೃಷಿಕರಿಗಾಗಿ ಉಚಿತ ತರಬೇತಿ ಶಿಬಿರ

Share the Article

ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಾಗಲಕೋಟೆ ಇದರ ವತಿಯಿಂದ ಉಚಿತ ಸಮಗ್ರ ಕೃಷಿ, ಹಣ್ಣು ಬೆಳೆಗಳ ಕೃಷಿ, ರೇಷ್ಮೆ ಕೃಷಿ, ಜೇನು ಕೃಷಿ, ಪುಷ್ಪ ಮತ್ತು ತರಕಾರಿ ಬೆಳೆಗಳ ಕೃಷಿ ತರಬೇತಿ ಶಿಬಿರವನ್ನು ಮಾರ್ಚ್ ತಿಂಗಳಿನಲ್ಲಿ ಬಾಗಲಕೋಟೆಯಲ್ಲಿ ಏರ್ಪಡಿಸಿದ್ದು, ಆಸಕ್ತರು ಹೆಸರು ನೋಂದಾಯಿಸಿಕೊಳ್ಳಲು ಆಹ್ವಾನಿಸಲಾಗಿದೆ.

ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ 18 ರಿಂದ 55 ವರ್ಷದೊಳಗಿನ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು, ಮಹಿಳೆಯರು ಮೊ.ಸಂ: 9482630790 ಗೆ ಕರೆ ಮಾಡಿ ಫೆಬ್ರವರಿ 28 ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿ.ವಿ.ವಿ.ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟ-587103 ದೂ.ಸಂ: 08354-244028, 244048 ಗೆ ಸಂಪರ್ಕಿಸಬಹುದು ಎಂದು ಕಾರ್ಯನಿರ್ವಾಹಕ ನಿರ್ದೇಶಕರಾದ ಶಿವಶಂಕರ ಮುದಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply