ಹಿಜಾಬ್ ವಿವಾದ : ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದ ತ್ರಿಸದಸ್ಯ ಪೀಠ
ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ.
ರಾಜ್ಯ ಸರಕಾರದ ವಾದ ಆಲಿಸಿದಂತ ನ್ಯಾಯಪೀಠವು, ಅರ್ಜಿಯ ವಿಚಾರಣೆಯನ್ನು ಮತ್ತೆ ನಾಳೆ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ ಮಾಡಿದೆ.
7 ದಿನವಾದ ಇಂದು ಹೈಕೋರ್ಟ್ ನಲ್ಲಿ ಮಧ್ಯಾಹ್ನ 2.30 ಕ್ಕೆ ಹಿಜಾಬ್ ಅನುಮತಿ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಪ್ರಾರಂಭವಾಗಿತ್ತು. ವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.