ರಶ್ಮಿಕಾ – ವಿಜಯ್ ದೇವರಕೊಂಡ ಮದುವೆ ಶೀಘ್ರದಲ್ಲೇ!!!

ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಶೀಘ್ರದಲ್ಲಿಯೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

 

ಈ ವರ್ಷದ ಕೊನೆಯಲ್ಲಿ ಈ ಜೋಡಿ ಸಪ್ತಪದಿ ತುಳಿಯುವ ಬಗ್ಗೆ ಊಹಾಪೋಹಗಳು ಎದ್ದಿವೆ. ಆದರೆ ಈ ಬಗ್ಗೆ ರಶ್ಮಿಕಾ ಆಗಲಿ, ವಿಜಯ್ ದೇವರಕೊಂಡ ಇನ್ನೂ ಬಾಯಿ ಬಿಟ್ಟಿಲ್ಲ. ಇವರಿಬ್ಬರು ಸೂಪರ್ ಹಿಟ್ ಚಿತ್ರಗಳಾದ ಗೀತಾ ಗೋವಿಂದಂ ಮತ್ತು ಡಿಯರ್ ಕಾಮ್ರೇಡ್ ನಲ್ಲಿ ಜೊತೆಗೆ ನಟಿಸಿದ್ದರು. ಆವಾಗಲೇ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿತ್ತು. ಆದರೆ ಇದೀಗ ಈ ವರ್ಷದ ಕೊನೆಗೆ ಮದುವೆಯಾಗುತ್ತಾರೆ ಎಂಬ ಬಗ್ಗೆ ವರದಿಯಾಗಿದೆ.

ಇಬ್ಬರು ಕೂಡಾ ಅವರವರ ಫಿಲ್ಮ್ ಗಳಲ್ಲಿ ಸದ್ಯಕ್ಕೆ ಬಿಜಿಯಾಗಿದ್ದಾರೆ. ರಶ್ಮಿಕಾ ಇತ್ತೀಚೆಗೆ ಮುಂಬೈನಲ್ಲಿ ಅಪಾರ್ಟ್‌ಮೆಂಟ್ ಒಂದನ್ನು ಖರೀದಿಸಿದ್ದು, ಇಬ್ಬರೂ ಕೂಡಾ ಮುಂಬೈನಲ್ಲಿ ಹೆಚ್ಚಾಗಿ ತಿರುಗಾಡುತ್ತಿರುವುದು ಪಾಪರಾಜಿಗಳ ಕಣ್ಣಿಗೆ ಬಿದ್ದಿದೆ.

Leave A Reply

Your email address will not be published.