ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್ : ಓರ್ವ ಅರೆಸ್ಟ್| ಆರೋಪಿಯಿಂದ ಸ್ಫೋಟಕ ಮಾಹಿತಿ ಬಹಿರಂಗ

ಶಿವಮೊಗ್ಗ : ಬಜರಂಗದಳ‌ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣವಾಗಿ ಐದು ಮಂದಿ ಕೃತ್ಯ ಎಸಗಿರುವುದು ಸಾಬೀತಾಗಿದ್ದು, ಅದರಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಯು ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದ ಆರೋಪಿಯಾಗಿದ್ದಾನೆ‌. ದೊಡ್ಡ ಪೇಟೆ ಪೊಲೀಸರಿಂದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

 

ಈ ವೇಳೆ ಆರೋಪಿಯು ಹಳೆಯ ವೈಷಮ್ಯದ ಕಾರಣ ಕೊಲೆ ಮಾಡಲಾಗಿದ್ದು, ಐದು ಮಂದಿ ಲಾಂಗ್ ಮಚ್ಚುಗಳಿಂದ ಹರ್ಷನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಉಳಿದ ನಾಲ್ವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Leave A Reply

Your email address will not be published.