ಹಿಜಾಬ್ ವಿವಾದ : ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ.

 

ಹಿಜಾಬ್ ಪ್ರಕರಣದ 9 ನೇ ದಿನದ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ನಾಳೆ 2.30 ಕ್ಕೆ ಮುಂದೂಡಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿದ್ದೀನ್ ನೇತೃತ್ವದ ತ್ರಿ ಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸುತ್ತಿದ್ದು ವಿಚಾರಣೆ ನಾಳೆಗೆ ಮುಂದೂಡಿದೆ.

ಸಮವಸ್ತ್ರದ ಜೊತೆಗೆ ಹಿಜಾಬ್ ಧರಿಸಲು ಕೋರಿದ್ದ ಅರ್ಜಿ ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 2.30 ಕ್ಕೆ ಮುಂದೂಡಿದೆ.

Leave A Reply

Your email address will not be published.