ಉದ್ಯೋಗಾಕಾಂಕ್ಷಿಗಳೇ ಗಮನಿಸಿ: KPSC ಯಿಂದ ನೇಮಕ ಅಧಿಸೂಚನೆ : RDWSD ಇಲಾಖೆಯಲ್ಲಿ 188 ಹುದ್ದೆಗಳಿಗೆ ಅರ್ಜಿ ಆಹ್ವಾನ|

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ ಸಹಾಯಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಲು ಮಾರ್ಚ್ 30 ರವರೆಗೆ ಅವಕಾಶ ನೀಡಲಾಗಿದೆ.

ನೇಮಕಾತಿ ಆಯೋಗ : ಕರ್ನಾಟಕ ಲೋಕಸೇವಾ ಆಯೋಗ

ಉದ್ಯೋಗ ಇಲಾಖೆ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ

ಹುದ್ದೆಗಳ ಸಂಖ್ಯೆ : 188 ( 129 NHK+59 HK)

ಹುದ್ದೆ ಹೆಸರು : ಸಹಾಯಕ ಅಭಿಯಂತರರು ಗ್ರೇಡ್ -1

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28-02-2022

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-03-2022 ( 11-45 ರಾತ್ರಿ)

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 31-03-2022

ನೇಮಕಾತಿ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ

ವಿದ್ಯಾರ್ಹತೆ : ಕರ್ನಾಟಕ ರಾಜ್ಯ ಸರಕಾರದಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿಇ ಇನ್ ಸಿವಿಲ್ / ಪರಿಸರ ವಿಷಯದಲ್ಲಿ ಪದವಿ ಪಡೆದಿರಬೇಕು.

ಅರ್ಜಿ ಶುಲ್ಕ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 600, EWS, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50, ಎಸ್ ಸಿ/ ಎಸ್ ಟಿ/ ಪ್ರವರ್ಗ -1 ಅಭ್ಯರ್ಥಿಗಳಿಗೆ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.

ವಯೋಮಿತಿ ಅರ್ಹತೆ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ ವಯೋಮಿತಿ ಈ ಕೆಳಗಿನಂತಿವೆ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, EWS , ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ, ಎಸ್ ಸಿ / ಎಸ್ ಟಿ / ಪ್ರವರ್ಗ – 1 ಅಭ್ಯರ್ಥಿಗಳಿಗೆ, ಪಿಡ್ಬ್ಲೂಡಿ ಅಭ್ಯರ್ಥಿಗಳಿಗೆ : 40 ವರ್ಷ

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.