ಮದುವೆ ಮುಗಿಸಿ ವಾಪಸಾಗುತ್ತಿದ್ದ ವೇಳೆ ಕಮರಿಗೆ ಬಿದ್ದ ವಾಹನ | 14 ಮಂದಿ ದುರಂತ ಸಾವು !!

ಮದುವೆಯ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವಾಹನವೊಂದು ಆಳವಾದ ಕಮರಿಗೆ ಬಿದ್ದು 14 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

 

ಚಂಪಾವತ್ ಜಿಲ್ಲೆಯಲ್ಲಿ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತರು ಚಂಪಾವತ್​ ಜಿಲ್ಲೆಯ ತನಕ್​ಪುರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದ ವೇಳೆ ಮ್ಯಾಕ್ಸ್​ ವಾಹನ ಆಯತಪ್ಪಿ ಕಂದಕಕ್ಕೆ ಉರುಳಿದೆ. ಪರಿಣಾಮವಾಗಿ ವಾಹನದಲ್ಲಿದ್ದವರ ಪೈಕಿ 11 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಂಭೀರ ಗಾಯಗಳಾದವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಮತ್ತೆ ಮೂವರು ಮೃತಪಟ್ಟಿದ್ದಾರೆ.

ಮಾಹಿತಿ ತಿಳಿದ ಪೊಲೀಸರು, ರಕ್ಷಣಾ ಪಡೆಗಳು ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave A Reply

Your email address will not be published.