ಬಂಟ್ವಾಳ : ಕಲ್ಲಿನ ಕೋರೆಯ ಹೊಂಡದ ನೀರಿನಲ್ಲಿ ಮುಳುಗಿ ಇಬ್ಬರು ಸಾವು

Share the Article

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಏಲಬೆಯಲ್ಲಿ ಕಲ್ಲಿನ ಕೋರೆಯ ಹೊಂಡದಲ್ಲಿದ್ದ ನೀರಿಗೆ ಸ್ನಾನಕ್ಕೆಂದು ಇಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ವೇಳೆಗೆ ಬೆಳಕಿಗೆ ಬಂದಿದೆ.

ಸ್ಥಳೀಯ ನಿವಾಸಿ ಜಗದೀಶ್(45) ಹಾಗೂ ಅಲ್ಲಿಪಾದೆ ನಿದೀಶ್(17) ಮೃತಪಟ್ಟವರು.

ಅವರು ಸಂಜೆಯ ವೇಳೆಗೆ ಸ್ನಾನಕ್ಕೆಂದು ನೀರಿಗೆ ಇಳಿದಿದ್ದು, ಆ ವೇಳೆ ಹೊಂಡ ಇರುವುದು ತಿಳಿಯದೆ ಮುಳುಗಿ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಮೃತ ನಿದೀಶ್ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಅಕ್ಕನ ಮನೆಗೆ ತೆರಳಿದ್ದ ಎನ್ನಲಾಗಿದೆ.

ಬಂಟ್ವಾಳ ಅಗ್ನಿಶಾಮಕ ದಳ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Leave A Reply